ADVERTISEMENT

ಗುವಾಹಟಿಯಲ್ಲಿ 20 ಎಲ್‌ಪಿಜಿ ಸಿಲಿಂಡರ್ ಸ್ಫೋಟ; 66 ಗುಡಿಸಲುಗಳು ಭಸ್ಮ

ಪಿಟಿಐ
Published 20 ಡಿಸೆಂಬರ್ 2020, 4:33 IST
Last Updated 20 ಡಿಸೆಂಬರ್ 2020, 4:33 IST
ಬೆಂಕಿ ನಂದಿಸುತ್ತಿರುವ ಅಗ್ನಿಶಾಮಕ ದಳದ ಸಿಬ್ಬಂದಿಗಳು (ಪಿಟಿಐ)
ಬೆಂಕಿ ನಂದಿಸುತ್ತಿರುವ ಅಗ್ನಿಶಾಮಕ ದಳದ ಸಿಬ್ಬಂದಿಗಳು (ಪಿಟಿಐ)   

ಗುವಾಹಟಿ (ಅಸ್ಸಾಂ): ಅಸ್ಸಾಂನ ಗುವಾಹಟಿಯಲ್ಲಿ ಶನಿವಾರ ಸುಮಾರು 20 ಎಲ್‌ಪಿಜಿ ಸಿಲಿಂಡರ್‌ಗಳು ಸ್ಫೋಟಗೊಂಡ ಪರಿಣಾಮ ಸಂಭವಿಸಿದ ಅನಾಹುತದಲ್ಲಿ 66 ಗುಡಿಸಲುಗಳು ಬೆಂಕಿಗಾಹುತಿಯಾಗಿವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಸಾವು-ನೋವು ಸಂಭವಿಸಿಲ್ಲ ಎಂದು ತಿಳಿಸಿದ್ದಾರೆ.

ನಗರದ ಜಲುಕ್‌ಬರಿಯಲ್ಲಿ ಅಗ್ನಿ ಅವಘಡ ಸಂಭವಿಸಿತ್ತು. ಒಂದು ಗುಡಿಸಲಿನ್ಲಲಿ ಬೆಂಕಿ ಕಾಣಿಸಿಕೊಂಡ ನಂತರ ಅದು ಇತರೆ ಗುಡಿಸಲುಗಳಿಗೆ ಹರಡಿತ್ತು. ಮನೆಗಳಲ್ಲಿ ಇರಿಸಲಾಗಿದ್ದ ಎಲ್‌ಪಿಜಿ ಸಿಲಿಂಡರ್‌ಗಳು ಒಂದರ ಬಳಿಕ ಒಂದರಂತೆ ಸ್ಫೋಟಗೊಂಡಿತ್ತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ADVERTISEMENT

ಘಟನೆಯ ಹಿಂದಿನ ನಿಖರ ಕಾರಣಗಳು ತಿಳಿದು ಬಂದಿಲ್ಲ. ಪ್ರಾಥಮಿಕ ತನಿಖೆಯಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿರಬಹುದು ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ತನಿಖೆಗೆ ಆದೇಶ ಹೊರಡಿಸಲಾಗಿದೆ.

14 ಅಗ್ನಿ ಶಾಮಕ ವಾಹನಗಳು ಸುಮಾರು ಮೂರು ಗಂಟೆಗಳಷ್ಟು ಕಾಲ ನಡೆಸಿದ ನಿರಂತರ ಪ್ರಯತ್ನದ ಬಳಿಕ ಬೆಂಕಿ ನಂದಿಸಲು ಯಶಸ್ವಿಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.