ADVERTISEMENT

ಜ್ಞಾನವಾಪಿ ಮಸೀದಿ ಸಮಿತಿಯನ್ನು ಪ್ರತಿನಿಧಿಸುತ್ತಿದ್ದ ವಕೀಲ ಹೃದಯಾಘಾತದಿಂದ ನಿಧನ

ಪಿಟಿಐ
Published 1 ಆಗಸ್ಟ್ 2022, 6:06 IST
Last Updated 1 ಆಗಸ್ಟ್ 2022, 6:06 IST
ಜ್ಞಾನವಾಪಿ ಮಸೀದಿ
ಜ್ಞಾನವಾಪಿ ಮಸೀದಿ    

ವಾರಾಣಸಿ: ಜ್ಞಾನವಾಪಿ-ಶೃಂಗಾರ ಗೌರಿ ಸಂಕೀರ್ಣ ಪ್ರಕರಣದಲ್ಲಿ ಮಸೀದಿ ಸಮಿತಿಯನ್ನು ಪ್ರತಿನಿಧಿಸುತ್ತಿದ್ದ ವಕೀಲ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಅವರಿಗೆ 62 ವರ್ಷ ವಯಸ್ಸಾಗಿತ್ತು.

ವಕೀಲ ಅಭಯ್ ನಾಥ್ ಯಾದವ್ ಅವರು ಭಾನುವಾರ ರಾತ್ರಿ ನಿಧನರಾಗಿದ್ದು, ಸೋಮವಾರ ಅಂತ್ಯಕ್ರಿಯೆ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.

ಯಾದವ್ ಅವರು ಜ್ಞಾನವಾಪಿ ಪ್ರಕರಣದಲ್ಲಿ ಅಂಜುಮನ್ ಇಂತೇಜಾಮಿಯಾ ಮಸೀದಿ ಸಮಿತಿಯನ್ನು ಪ್ರತಿನಿಧಿಸುತ್ತಿದ್ದ ವಕೀಲರಾಗಿದ್ದರು.

ADVERTISEMENT

1991ರ ಪೂಜಾ ಸ್ಥಳಗಳ ಕಾಯ್ದೆಯ ಸಮರ್ಥನೀಯತೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಅಲಹಾಬಾದ್‌ ಹೈಕೋರ್ಟ್‌ ಕಳೆದ ವಾರ ಆಗಸ್ಟ್‌ 3ಕ್ಕೆ ಮುಂದೂಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.