ಜ್ಞಾನವಾಪಿ ಮಸೀದಿ ಆವರಣದಲ್ಲಿ ಸಮೀಕ್ಷೆ ನಡೆಸುತ್ತಿರುವ ಎಎಸ್‌ಐ ತಂಡ
–ಪಿಟಿಐ ಚಿತ್ರ
ವಾರಾಣಸಿ: ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯು (ಎಎಸ್‌ಐ) ವಾರಾಣಸಿಯಲ್ಲಿನ ಜ್ಞಾನವಾಪಿ ಮಸೀದಿಯ ವೈಜ್ಞಾನಿಕ ಸಮೀಕ್ಷೆಗೆ ಮತ್ತೆ ಎಂಟು ವಾರ ಸಮಾವಕಾಶ ಕೋರಿದೆ.
ಈ ಸಂಬಂಧ ಸುದ್ದಿ ಸಂಸ್ಥೆ 'ಎಎನ್‌ಐ' ಎಕ್ಸ್ (ಟ್ವಿಟರ್)ನಲ್ಲಿ ಮಾಹಿತಿ ನೀಡಿದೆ.
ವಾರಾಣಸಿ ಜಿಲ್ಲಾ ನ್ಯಾಯಾಲಯವು ಎಎಸ್‌ಐ ಮನವಿ ಮೇಲಿನ ವಿಚಾರಣೆಯನ್ನು ಸೆಪ್ಟೆಂಬರ್ 8ರಂದು ನಡೆಸಲಿದೆ.
ಸಂಪೂರ್ಣ ಸಮೀಕ್ಷೆ ನಡೆಸಲು ವಾರಾಣಸಿ ನ್ಯಾಯಾಲಯವು ಇದಕ್ಕೂ ಮೊದಲು ನಾಲ್ಕು ವಾರಗಳ ಸಮಯ ನೀಡಿತ್ತು. ಅದಕ್ಕೆ ಸಂಬಂಧಿಸಿದ ವರದಿಯನ್ನು ಇಂದು (ಸೆ.2) ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.