ಪ್ರಯಾಗ್‌ರಾಜ್: ‘ಜ್ಞಾನವಾಪಿ ಮಸೀದಿಯೊಳಗಿನ ‘ವಜುಖಾನಾ’ ಭಾಗದ ಸಮೀಕ್ಷೆ ನಡೆಸುವಂತೆ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ (ಎಎಸ್ಐ) ನಿರ್ದೇಶನ ನೀಡಲು ಸಾಧ್ಯವಿಲ್ಲ’ ಎಂದಿದ್ದ ವಾರಾಣಸಿ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಅಲಹಾಬಾದ್ ಹೈಕೋರ್ಟ್ ಡಿ. 17ಕ್ಕೆ ಮುಂದೂಡಿದೆ.
ಈ ವಿಚಾರಕ್ಕೆ ಸಂಬಂಧಿಸಿ ಡಿ. 16ರಂದು ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ನಡೆಯಲಿದೆ ಎಂದು ಹೈಕೋರ್ಟ್‌ಗೆ ತಿಳಿಸಲಾಯಿತು. ಈ ಮಾಹಿತಿ ತಿಳಿಯುತ್ತಿದ್ದಂತೆಯೇ ನ್ಯಾಯಮೂರ್ತಿ ರೋಹಿತ್ ರಂಜನ್ ಅಗರ್ವಾಲ್ ಅವರು ಅರ್ಜಿಯ ವಿಚಾರಣೆಯನ್ನು ಡಿ.17ಕ್ಕೆ ಮುಂದೂಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.