ADVERTISEMENT

ದೆಹಲಿಯಲ್ಲಿ ಆಲಿಕಲ್ಲು ಮಳೆ

​ಪ್ರಜಾವಾಣಿ ವಾರ್ತೆ
Published 19 ಮಾರ್ಚ್ 2023, 15:57 IST
Last Updated 19 ಮಾರ್ಚ್ 2023, 15:57 IST
.
.   

ನವದೆಹಲಿ (‍ಪಿಟಿಐ): ದೆಹಲಿಯ ಕೆಲ ಭಾಗಗಳಲ್ಲಿ ಭಾನುವಾರ ಆಲಿಕಲ್ಲು ಮಳೆಯಾಗಿದ್ದು, ‌ಗರಿಷ್ಠ ತಾಪಮಾನ ಸರಾಸರಿಗಿಂತ ಮೂರು ಡಿಗ್ರಿ ಕಡಿಮೆಯಾಗಿ 28 ಡಿಗ್ರಿ ಸೆಲ್ಸಿಯಸ್‌ ತಲುಪಿದೆ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ.‌

‌ಕನಿಷ್ಠ ತಾಪಮಾನ 15.4 ಡಿಗ್ರಿ ಸೆಲ್ಸಿಯಸ್‌ಗೆ ಇಳಿದಿದೆ. ಪಾಲಂ, ಚಿಲ್ಪಿಘಾಟ್ ಮತ್ತು ಅಯಾನಗರ ಸೇರಿದಂತೆ ವಿವಿಧ ಭಾಗಗಳಲ್ಲಿ ಆಲಿಕಲ್ಲು ಮಳೆಯಾಗಿದೆ.

ದೆಹಲಿಯ ಪ್ರಮುಖ ಸ್ಥಳಗಳಲ್ಲಿ ಗಂಟೆಗೆ 30-40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಮೂಲಕ ಗುಡುಗು, ಆಲಿಕಲ್ಲು ಮಳೆ ಮತ್ತು ಲಘು ಮಳೆಯಾಗಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ.

ADVERTISEMENT

ಗರಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 16 ಡಿಗ್ರಿ ಸೆಲ್ಸಿಯಸ್ ಇರಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.