ADVERTISEMENT

ಹಜ್‌ 2021 : ಕೊರೊನಾ ಮಾರ್ಗಸೂಚಿ ಮೇಲೆ ನಿರ್ಧಾರ

​ಪ್ರಜಾವಾಣಿ ವಾರ್ತೆ
Published 19 ಅಕ್ಟೋಬರ್ 2020, 10:38 IST
Last Updated 19 ಅಕ್ಟೋಬರ್ 2020, 10:38 IST
ಮುಕ್ತಾರ್ ಅಬ್ಬಾಸ್ ನಖ್ವಿ
ಮುಕ್ತಾರ್ ಅಬ್ಬಾಸ್ ನಖ್ವಿ   

ನವದೆಹಲಿ: ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದ ಕೋವಿಡ್‌ 19 ಮಾರ್ಗಸೂಚಿಗಳನ್ನು ಆಧರಿಸಿ ಹಾಗೂ ಸೌದಿ ಅರೇಬಿಯಾ ಸರ್ಕಾರದ ಅಂತಿಮ ಕರೆಯನ್ನು ಪರಿಗಣಿಸಿ ಮುಂದಿನ ವರ್ಷದ ಹಜ್‌ ಯಾತ್ರೆ ಕುರಿತು ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಖಾತೆ ಸಚಿವ ಮುಕ್ತಾರ್ ಅಬ್ಬಾಸ್ ನಖ್ವಿ ತಿಳಿಸಿದ್ದಾರೆ.

ಸೋಮವಾರ ನಡೆದಹಜ್‌ ಸಮಿತಿಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದ ಅವರು, ‘ಮುಂದಿನ ವರ್ಷ (2021) ಜೂನ್ – ಜುಲೈನಲ್ಲಿ ಹಜ್‌ ಯಾತ್ರೆ ನಿಗದಿಯಾಗಿದೆ. ಭಾರತೀಯ ಹಜ್ ಸಮಿತಿ ಮತ್ತು ಇತರೆ ಭಾರತೀಯ ಸಂಸ್ಥೆಗಳು ಸಾಂಪ್ರದಾಯಿಕವಾಗಿ ಹಜ್ ಯಾತ್ರೆಗೆ ಅರ್ಜಿ ಆಹ್ವಾನದಂತಹ ಪ್ರಕ್ರಿಯೆಗಳನ್ನು ನಡೆಸುತ್ತಿವೆ ಎಂದು ಹೇಳಿದರು.

ಕೊರೊನಾ ಸಾಂಕ್ರಾಮಿಕ ರೋಗ ಹಾಗೂ ಜನರ ಆರೋಗ್ಯ ಮತ್ತು ಯೋಗಕ್ಷೇಮದ ದೃಷ್ಟಿಯಿಂದ ಸೌದಿ ಅರೇಬಿಯಾ ಮತ್ತು ಭಾರತ ಸರ್ಕಾರ ಹೊರಡಿಸುವ ಮಾರ್ಗಸೂಚಿ ಅನ್ವಯ ‘ಹಜ್ 2021‘ ಯಾತ್ರೆಗೆ ಸಂಬಂಧಿಸಿದಂತೆ ಸೂಕ್ತ ಸಮಯದಲ್ಲಿ ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ‘ ಎಂದು ನಖ್ವಿ ತಿಳಿಸಿದರು.

ADVERTISEMENT

ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಯಾತ್ರಾರ್ಥಿಗಳ ಆರೋಗ್ಯ ಮತ್ತು ಯೋಗಕ್ಷೇಮ ನೋಡಿಕೊಳ್ಳುವುದು ಸರ್ಕಾರದ ಆದ್ಯತೆಯಾಗಿದೆ ಎಂದು ಹೇಳಿದ ಅವರು, ಈ ನಿಟ್ಟಿನಲ್ಲಿ ಭಾರತೀಯ ಸಂಸ್ಥೆಗಳು ಅಗತ್ಯ ವ್ಯವಸ್ಥೆಗಳನ್ನು ಖಚಿತಪಡಿಸಲಿದ್ದು, ಹಜ್ ಸಮಿತಿ ಕೂಡ ಈ ನಿಟ್ಟಿನಲ್ಲಿ ಸಿದ್ಧತೆಗಳನ್ನು ಪ್ರಾರಂಭಿಸಿದೆ ಎಂದು ಸಚಿವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.