
ನವದೆಹಲಿ (ಪಿಟಿಐ): ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ (ಎಚ್‌ಎಎಲ್) ತನ್ನ ತೇಜಸ್ ಲಘು ಯುದ್ಧ ವಿಮಾನ ಕಾರ್ಯಕ್ರಮಕ್ಕಾಗಿ 97 ಜೆಟ್ ಎಂಜಿನ್‌ಗಳನ್ನು ಖರೀದಿಸಲು ಜಿಇ ಏರೋಸ್ಪೇಸ್ ಜತೆ ಒಪ್ಪಂದ ಮಾಡಿಕೊಂಡಿದೆ.
ಒಪ್ಪಂದದ ಪ್ರಕಾರ, ಎಫ್404–ಜಿಇ–ಐಎನ್20 ಎಂಜಿನ್‌ಗಳ ವಿತರಣೆಯು 2027ರಿಂದ ಪ್ರಾರಂಭವಾಗಲಿದ್ದು, 2032ರ ವೇಳೆಗೆ ಪೂರೈಕೆ ಪೂರ್ಣಗೊಳಿಸಬೇಕಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
97 ಲಘು ಯುದ್ಧ ವಿಮಾನ ಎಂಕೆ1ಎ ಕಾರ್ಯಕ್ರಮವನ್ನು ಕಾರ್ಯಗತಗೊಳಿಸಲು ಎಂಜಿನ್‌ಗಳು ಹಾಗೂ ‘ಪೂರಕ ಪ್ಯಾಕೇಜ್’ ಖರೀದಿಗೆ ಜನರಲ್ ಎಲೆಕ್ಟ್ರಿಕ್ ಕಂಪನಿಯೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ.
ಭಾರತೀಯ ವಾಯುಪಡೆಗೆ 97 ತೇಜಸ್ ಎಂಕೆ–1ಎ ಲಘು ಯುದ್ಧ ವಿಮಾನಗಳನ್ನು ಖರೀದಿಸಲು ರಕ್ಷಣಾ ಸಚಿವಾಲಯವು ಎಚ್‌ಎಎಲ್‌ನೊಂದಿಗೆ ಸೆಪ್ಟೆಂಬರ್‌ನಲ್ಲಿ ₹62,370 ಕೋಟಿ ಮೊತ್ತದ ಒಪ್ಪಂದ ಮಾಡಿಕೊಂಡಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.