ADVERTISEMENT

ದುರ್ಬಲ ವರ್ಗದವರಿಗೆ ಆದ್ಯತೆ: ಪ್ರಧಾನಿ ನರೇಂದ್ರ ಮೋದಿ

ಪಿಟಿಐ
Published 15 ಆಗಸ್ಟ್ 2021, 6:04 IST
Last Updated 15 ಆಗಸ್ಟ್ 2021, 6:04 IST
ನರೇಂದ್ರ ಮೋದಿ
ನರೇಂದ್ರ ಮೋದಿ   

ನವದೆಹಲಿ: ‘ದುರ್ಬಲ ಸಮುದಾಯಗಳನ್ನು ಕೈಹಿಡಿದು ಅಭಿವೃದ್ಧಿಯ ಪಥದಲ್ಲಿ ಕೊಂಡೊಯ್ಯುವುದು ಅಗತ್ಯವಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಪ್ರತಿಪಾದಿಸಿದರು.

ಕೆಂಪು ಕೋಟೆಯಲ್ಲಿ ಭಾನುವಾರ ನಡೆದ 75ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ದೇಶವನ್ನುದ್ದೇಶಿಸಿ ಭಾಷಣ ಮಾಡಿದ ಅವರು, ‘ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗದವರು ಮತ್ತು ಸಾಮಾನ್ಯ ವರ್ಗದ ಬಡವರಿಗೆ ಮೀಸಲಾತಿ ಕಲ್ಪಿಸಲಾಗುತ್ತಿದೆ’ ಎಂದು ಹೇಳಿದರು.

‘ದೇಶವು ಅಭಿವೃದ್ಧಿ ಪಥದಲ್ಲಿ ಸಾಗುವಾಗ ಯಾರೂ ಹಿಂದುಳಿಯಬಾರದರು. ಸೌಲಭ್ಯಗಳಿಂದ ವಂಚಿತರಾದವರಿಗೆ ವಿಶೇಷ ಆದ್ಯತೆ ನೀಡಬೇಕು’ ಎಂದು ಹೇಳಿದರು.

ADVERTISEMENT

’ಅಖಿಲ ಭಾರತ ಕೋಟಾ ಅಡಿಯಲ್ಲಿ ಇತರ ಹಿಂದುಳಿದ ವರ್ಗಗಳಿಗೆ ದೇಶದಲ್ಲಿನ ವೈದ್ಯಕೀಯ ಕೋರ್ಸ್‌ಗಳಲ್ಲಿ ಮೀಸಲಾತಿ ದೊರೆಯಲಿದೆ. ತಮ್ಮದೇ ಆದ ಹಿಂದುಳಿದ ವರ್ಗಗಳ ಪಟ್ಟಿಯನ್ನು ಸಿದ್ಧಪಡಿಸಲು ರಾಜ್ಯಗಳಿಗೆ ಅಧಿಕಾರ ನೀಡುವ ಮಸೂದೆಗೆ ಸಂಸತ್‌ ಅನುಮೋದನೆ ನೀಡಿದ್ದು, ಕಾಯ್ದೆಯಾಗಿ ಜಾರಿಗೆ ಬಂದಿದೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.