ADVERTISEMENT

ಹಂದ್ವಾರ ಎನ್‌ಕೌಂಟರ್‌: ಇಬ್ಬರು ಉಗ್ರರ ಹತ್ಯೆ, ಐವರು ಭದ್ರತಾ ಸಿಬ್ಬಂದಿ ಹುತಾತ್ಮ

ಮೂರು ದಿನ ನಡೆದ ಕಾರ್ಯಾಚರಣೆ

ಏಜೆನ್ಸೀಸ್
Published 3 ಮಾರ್ಚ್ 2019, 10:07 IST
Last Updated 3 ಮಾರ್ಚ್ 2019, 10:07 IST
–ಸಾಂದರ್ಭಿಕ ಚಿತ್ರ
–ಸಾಂದರ್ಭಿಕ ಚಿತ್ರ   

ಶ್ರೀನಗರ:ಜಮ್ಮು ಮತ್ತುಕಾಶ್ಮೀರದ ಹಂದ್ವಾರದಲ್ಲಿ ಭದ್ರತಾ ಪಡೆ ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದೆ.

ಉಗ್ರರ ವಿರುದ್ಧದ ಕಾರ್ಯಾಚರಣೆ ಮುಂದುವರಿದಿದೆ. ಮೂರುದಿನಗಳಿಂದ ನಡೆಯುತ್ತಿರುವ ಎನ್‌ಕೌಂಟರ್‌ನಲ್ಲಿ ಭದ್ರತಾ ಪಡೆಯ ಐವರು ಯೋಧರು ಹುತಾತ್ಮರಾಗಿದ್ದಾರೆ.

ಹಂದ್ವಾರ ಎನ್‌ಕೌಂಟರ್‌ ಬಹುತೇಕ ಪೂರ್ಣಗೊಂಡಿದೆ. ಅಂತಿಮ ಶೋಧ ನಡೆಯುತ್ತಿದೆ. ಇಬ್ಬರು ಉಗ್ರರ ಮೃತದೇಹಗಳನ್ನು ವಶಕ್ಕೆ ಪಡೆಯಲಾಗಿದ್ದು, ಅವರ ಗುರುತು ಪತ್ತೆ ಮಾಡಲಾಗುತ್ತಿದೆ. ತಾರಿಣಿ ಪ್ರದೇಶ ಹೆಚ್ಚು ನಾಗರಿಕ ವಸತಿಯಿಂದ ಕೂಡಿದೆ. ಇಲ್ಲಿ ನಡೆದ ಘಟನೆಯಲ್ಲಿ ಸಿಆರ್‌ಪಿಎಫ್‌ನ ಮೂವರು ಯೋಧರು ಹಾಗೂ ಜಮ್ಮು ಮತ್ತು ಕಾಶ್ಮೀರದ ಇಬ್ಬರು ಪೊಲೀಸರು ಹುತಾತ್ಮರಾಗಿದ್ದಾರೆ ಎಂದು ಕಾಶ್ಮೀರ ಐಜಿಪಿ ಎಸ್‌ಪಿ ಪಾಣಿ ತಿಳಿಸಿದ್ದಾರೆ.

ADVERTISEMENT

ಪುಲ್ವಾಮದಲ್ಲಿ ಉಗ್ರರು ನಡೆಸಿದ ಬಾಂಬ್‌ ದಾಳಿಯ ಬಳಿಕ ಭಾರತೀಯ ವಾಯುಪಡೆ ‘ಏರ್‌ ಸ್ಟ್ರೈಕ್‌’ ನಡೆಸಿ ಗಡಿಯಾಚೆಗೆ ಪಾಕಿಸ್ತಾನದ ನೆಲದಲ್ಲಿ ಜೈಷ್ ಉಗ್ರರ ನೆಲೆಯನ್ನು ಧ್ವಂಸಗೊಳಿಸಿದೆ. ಇದಾದ ಬಳಿಕ, ಬಾರತದತ್ತ ಬರುತ್ತಿದ್ದ ಪಾಕಿಸ್ತಾನದ ಎಫ್‌–16 ಯುದ್ಧ ವಿಮಾನವನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ.ಈ ಎಲ್ಲಾ ಬೆಳವಣಿಗೆಗಳ ನಡುವೆಯೂ ಗಡಿಯಲ್ಲಿ ಪಾಕಿಸ್ತಾನ ಪದೇ ಪದೇ ಕದನ ವಿರಾಮ ಉಲ್ಲಂಘಿಸಿ ದಾಳಿ ನಡೆಸುತ್ತಲೇ ಇದೆ. ಉಗ್ರರು ನಾಗರಿಕರ ನಿವಾಸಗಳ ಮೇಲೆ ದಾಳಿ ನಡೆಸುತ್ತಲೇ ಇದ್ದಾರೆ. ಇದಕ್ಕೆ ಭಾರತೀಯ ಸೇನೆ ಪ್ರತ್ಯುತ್ತರ ನೀಡುತ್ತಲೇ ಇದೆ.

ಪಾಕಿಸ್ತಾನ ಸೇನೆಕದನ ವಿರಾಮ ಉಲ್ಲಂಘಿಸಿಜಮ್ಮು ಮತ್ತು ಕಾಶ್ಮೀರದ ರಜೋರಿಯಲ್ಲಿಶನಿವಾರ ನಡೆಸಿದ ಶೆಲ್‌ ದಾಳಿಗೆ ಮನೆ ಛಿದ್ರವಾಗಿರುವುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.