ADVERTISEMENT

ಕರ್ನಾಟಕದ ಮಾಜಿ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ನಿಧನ

ಪಿಟಿಐ
Published 8 ಮಾರ್ಚ್ 2020, 16:33 IST
Last Updated 8 ಮಾರ್ಚ್ 2020, 16:33 IST
   

ನವದೆಹಲಿ: ಕೇಂದ್ರದ ಮಾಜಿ ಕಾನೂನು ಸಚಿವ, ಕರ್ನಾಟಕದ ಮಾಜಿ ರಾಜ್ಯಪಾಲ ಎಚ್‌.ಆರ್‌.ಭಾರದ್ವಾಜ್‌ (83) ಅವರು ಭಾನುವಾರ ಇಲ್ಲಿ ನಿಧನರಾದರು.ಸೋಮವಾರ ಸಂಜೆ ಪಾರ್ಥಿವ ಶರೀರದ ಅಂತ್ಯಕ್ರಿಯೆ ನಡೆಯಲಿದೆ.

ಹೃದಯ ಸಂಬಂಧಿ ಕಾಯಿಲೆ ಹಾಗೂ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು ಎಂದು ಕುಟುಂಬದ ಮೂಲಗಳು ತಿಳಿಸಿವೆ. ಅವರು ಪತ್ನಿ, ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

ಕೇಂದ್ರದಲ್ಲಿ ಯುಪಿಎ–1 ಸರ್ಕಾರ ಇದ್ದಾಗ ಕಾನೂನು ಸಚಿವರಾಗಿದ್ದ ಅವರು, 2009ರಿಂದ 2014ರವರೆಗೆ ಕರ್ನಾಟಕದ ರಾಜ್ಯ‍ಪಾಲರಾಗಿದ್ದರು. ಕೆಲ ಕಾಲ ಕೇರಳದ ರಾಜ್ಯಪಾಲರಾಗಿಯೂ ಅವರು ಕೆಲಸ ಮಾಡಿದ್ದರು.

ADVERTISEMENT

‘ಡಿಸಿಎಂ ಲಕ್ಷ್ಮಣ ಸವದಿ ಸಂತಾಪ’
ಮಾಜಿ ರಾಜ್ಯಪಾಲ ಶ್ರೀ ಹಂಸರಾಜ್ ಭಾರದ್ವಾಜ್ ಅವರ ನಿಧನಕ್ಕೆ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಸಂತಾಪ ಸೂಚಿಸಿದ್ದಾರೆ.

ಹಂಸರಾಜ್ ಭಾರದ್ವಾಜ್ ಅವರು ಕರ್ನಾಟಕದ ರಾಜ್ಯಪಾಲರಾಗಿ, ಕೇಂದ್ರದಲ್ಲಿ ಕಾನೂನು ಮಂತ್ರಿಗಳಾಗಿ ಕರ್ತವ್ಯ ನಿರ್ವಹಿಸಿದ್ದರು. ಭಾರದ್ವಾಜ್ ಅವರು ನಮ್ಮನ್ನು ಅಗಲಿರುವುದು ನೋವಿನ ಸಂಗತಿ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.