ತ್ರಿವರ್ಣ ಧ್ವಜ
ನವದೆಹಲಿ: ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ‘ಹರ್ ಘರ್ ತಿರಂಗಾ‘ ( ಮನೆ ಮನೆಯಲ್ಲೂ ತ್ರಿವರ್ಣ ಧ್ವಜ) ಅಭಿಯಾನವನ್ನು ಆಚರಿಸುವಂತೆ ದೇಶದ ಜನರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಕರೆ ನೀಡಿದ್ದಾರೆ.
‘ಹರ್ ಘರ್ ತಿರಂಗಾ‘ ಅಭಿಯಾನ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ದೇಶದ ನಿವಾಸಿಗಳು ತಮ್ಮ ಮನೆಗಳಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸುವಂತೆ ಹಾಗೂ ರಾಷ್ಟ್ರಧ್ವಜದೊಂದಿಗೆ ಸೆಲ್ಫಿ ಹಿಡಿದು ನಿರ್ದಿಷ್ಟ ಪೋರ್ಟಲ್‌ನಲ್ಲಿ (harghartiranga.com) ಅಪ್‌ಲೋಡ್ ಮಾಡುವಂತೆ ಮನವಿ ಮಾಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಆರಂಭವಾದ 'ಹರ್ ಘರ್ ತಿರಂಗಾ' ಅಭಿಯಾನವು ದೇಶದ ಜನರನ್ನು ಒಗ್ಗೂಡಿಸುವಲ್ಲಿ ಮಹತ್ವದ ಪಾತ್ರ ವಹಿಸಿದೆ ಎಂದು ಅಮಿತ್ ಶಾ ಹೇಳಿದ್ದಾರೆ.
ಈ ಅಭಿಯಾನದ ಮೂಲಕ ಭಾರತೀಯರಲ್ಲಿ ದೇಶಭಕ್ತಿ ಮತ್ತು ರಾಷ್ಟ್ರದ ಮೇಲಿನ ಪ್ರೀತಿ ಸ್ಪಷ್ಟವಾಗಿ ಗೋಚರಿಸಲು ಅನುವು ಮಾಡಿಕೊಡುತ್ತದೆ ಎಂದು ಅವರು ತಿಳಿಸಿದ್ದಾರೆ.
ಈ ಅಭಿಯಾನವು 'ಆಜಾದಿ ಕಾ ಅಮೃತ್ ಮಹೋತ್ಸವ (ಭಾರತ ಸ್ವಾತಂತ್ರ್ಯ ಅಮೃತ ಮಹೋತ್ಸವ) ಭಾಗವಾಗಿ ಪ್ರಾರಂಭವಾದ ಅಭಿಯಾನವಾಗಿದೆ. ಈ ಅಭಿಯಾನದ ಮೂಲಕ ಭಾರತದ ಸ್ವಾತಂತ್ರ್ಯವನ್ನು ಸಂಭ್ರಮಿಸಲು ಮತ್ತು ಆ ದಿನವನ್ನು ವಿಶಿಷ್ಟವಾಗಿ ಗುರುತಿಸುವ ಸಲುವಾಗಿ ಜನರು ತ್ರಿವರ್ಣ ಧ್ವಜವನ್ನು ಮನೆಗಳ ಮೇಲೆ ಹಾರಿಸುವುದಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.