ADVERTISEMENT

ಹಾರ್ದಿಕ್‌ ಪಟೇಲ್‌ಗೆ ನಿರೀಕ್ಷಣಾ ಜಾಮೀನು

ಪಿಟಿಐ
Published 28 ಫೆಬ್ರುವರಿ 2020, 19:51 IST
Last Updated 28 ಫೆಬ್ರುವರಿ 2020, 19:51 IST
ಹಾರ್ದಿಕ್‌ ಪಟೇಲ್‌
ಹಾರ್ದಿಕ್‌ ಪಟೇಲ್‌   

ನವದೆಹಲಿ: ಪಾಟೀದಾರ್ ಸಮುದಾಯಕ್ಕೆ ಮೀಸಲಾತಿ ನೀಡಲು ಆಗ್ರಹಿಸಿ 2015ರಲ್ಲಿ ಪ್ರತಿಭಟನೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ಮುಖಂಡ ಹಾರ್ದಿಕ್‌ ಪಟೇಲ್‌ ಅವರಿಗೆ ಸುಪ್ರೀಂ ಕೋರ್ಟ್‌ ಮಾರ್ಚ್‌ 6ರವರೆಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಪ್ರಕರಣವನ್ನು ವಜಾ ಮಾಡಬೇಕೆಂದು ಕೋರಿ ಹಾರ್ದಿಕ್‌ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಯು.ಯು.ಲಲಿತ್‌ ಮತ್ತು ವಿನೀತ್‌ ಸರಣ್‌ ನೇತೃತ್ವದ ನ್ಯಾಯಪೀಠವು, ಗುಜರಾತ್‌ ಸರ್ಕಾರಕ್ಕೆ ನೋಟಿಸ್‌ ಜಾರಿ ಮಾಡಿದೆ.

‘2015ರಲ್ಲಿ ಎಫ್‌ಐಆರ್‌ ದಾಖಲಾಗಿದ್ದರೂ ಪ್ರಕರಣದ ತನಿಖೆ ಇನ್ನೂ ಬಾಕಿ ಇದೆ. ಈ ಕುರಿತು ಐದು ವರ್ಷಗಳ ಕಾಲ ಯಾವುದೇ ಕ್ರಮ ಕೈಗೊಳ್ಳದಿದ್ದುದು ಸರಿಯಲ್ಲ’ ಎಂದೂ ನ್ಯಾಯಪೀಠ ಹೇಳಿದೆ.

ADVERTISEMENT

ಪಾಟೀದಾರ್‌ ಅನಾಮತ್‌ ಆಂದೋಲನ ಸಮಿತಿಯ ನೇತೃತ್ವದಲ್ಲಿ ಹಾರ್ದಿಕ್‌ ಅವರು ಅಹಮದಾಬಾದ್‌ನಲ್ಲಿ ಹಮ್ಮಿಕೊಂಡಿದ್ದ ಬೃಹತ್‌ ರ‍್ಯಾಲಿಗೆ ಅನುಮತಿ ಪಡೆದಿರಲಿಲ್ಲ ಎಂದು ಆರೋಪಿಸಿ ಪೊಲೀಸರು ಎಫ್‌ಐಆರ್‌ ದಾಖಲಿಸಿಕೊಂಡಿದ್ದರು.

ನಿರೀಕ್ಷಣಾ ಜಾಮೀನಿಗಾಗಿ ಹಾರ್ದಿಕ್‌ ಸಲ್ಲಿಸಿದ್ದ ಅರ್ಜಿಯನ್ನು ಫೆ.17ರಂದು ಗುಜರಾತ್‌ ಹೈಕೋರ್ಟ್‌ ವಜಾಗೊಳಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.