ADVERTISEMENT

ದ್ವೇಷ ಭಾಷಣ: ಜಿತೇಂದ್ರ ನಾರಾಯಣ್ ತ್ಯಾಗಿಗೆ 3 ತಿಂಗಳು ಮಧ್ಯಂತರ ಜಾಮೀನು

ಪಿಟಿಐ
Published 17 ಮೇ 2022, 11:42 IST
Last Updated 17 ಮೇ 2022, 11:42 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಹರಿದ್ವಾರದಲ್ಲಿ ನಡೆದಿದ್ದಧರ್ಮ ಸಂಸದ್‌ನಲ್ಲಿ ಮುಸ್ಲಿಂ ಸಮುದಾಯದ ವಿರುದ್ಧ ದ್ವೇಷ ಭಾಷಣ ಮಾಡಿದ ಆರೋಪ ಮೇಲೆ ಬಂಧಿತರಾಗಿದ್ದ ಜಿತೇಂದ್ರ ನಾರಾಯಣ್ ತ್ಯಾಗಿ ಅವರಿಗೆ ಸುಪ್ರೀಂ ಕೋರ್ಟ್‌ ಮಂಗಳವಾರ 3 ತಿಂಗಳ ಕಾಲ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ಈ ಕುರಿತ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅಜಯ್‌ ರಸ್ತೋಗಿ ಮತ್ತು ವಿಕ್ರಮ್‌ ನಾಥ್‌ ಅವರನ್ನು ಒಳಗೊಂಡ ಸುಪ್ರೀಂಕೋರ್ಟ್‌ ಪೀಠ, ವೈದ್ಯಕೀಯ ಕಾರಣಗಳ ಹಿನ್ನೆಲೆಯಲ್ಲಿ ತ್ಯಾಗಿಅಲಿಯಾಸ್‌ವಾಸೀಂ ರಿಜ್ವಿ ಅವರಿಗೆ ಜಾಮೀನು ನೀಡಿದೆ. ಇದೇ ವೇಳೆ ದ್ವೇಷ ಭಾಷಣ ಮಾಡದಂತೆ, ವಿದ್ಯುನ್ಮಾನ, ಡಿಜಿಟಲ್‌ ಅಥವಾ ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಹೇಳಿಕೆ ನೀಡದಂತೆ ನಿಬಂಧನೆ ವಿಧಿಸಿದೆ.

ಕಳೆದ ವರ್ಷ ಡಿಸೆಂಬರ್‌ನಲ್ಲಿ ನಡೆದ ಧರ್ಮ ಸಂಸದ್‌ನಲ್ಲಿ ಕುರಾನ್‌ ಮತ್ತು ಪ್ರವಾದಿ ಮಹಮ್ಮದ್‌ ಅವರ ಕುರಿತು ಆಕ್ಷೇಪಾರ್ಹ ಭಾಷಣ ಮಾಡಲಾಗಿದೆ ಎಂದು ಆರೋಪಿಸಿ ತ್ಯಾಗಿ ಸೇರಿ ಹಲವರ ವಿರುದ್ಧ ನದೀಮ್‌ ಅಲಿ ಎಂಬುವರುಜ.2ರಂದು ದೂರು ದಾಖಲಿಸಿದ್ದರು. ಪ್ರಕರಣದಲ್ಲಿ ತ್ಯಾಗಿ ಅವರನ್ನು ಬಂಧಿಸಲಾಗಿತ್ತು. ಇವರಜಾಮೀನು ಅರ್ಜಿಯನ್ನು ಉತ್ತರಾಖಂಡ ಹೈಕೋರ್ಟ್‌ ವಜಾ ಮಾಡಿತ್ತು. ಅನಂತರ ತ್ಯಾಗಿ ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.