ADVERTISEMENT

ಪಂಜಾಬ್ ಎಎಪಿ ಸಂಸದ ಬಿಜೆಪಿಗೆ

​ಪ್ರಜಾವಾಣಿ ವಾರ್ತೆ
Published 28 ಮಾರ್ಚ್ 2019, 19:29 IST
Last Updated 28 ಮಾರ್ಚ್ 2019, 19:29 IST
ಹರೀಂದರ್ ಸಿಂಗ್ ಖಾಲ್ಸಾ ಅವರನ್ನು ದೆಹಲಿಯ ಬಿಜೆಪಿ ಕಚೇರಿಯಲ್ಲಿ ಅರುಣ್ ಜೇಟ್ಲಿ ಅವರು ಪಕ್ಷಕ್ಕೆ ಬರಮಾಡಿಕೊಂಡರು–ಪಿಟಿಐ ಚಿತ್ರ
ಹರೀಂದರ್ ಸಿಂಗ್ ಖಾಲ್ಸಾ ಅವರನ್ನು ದೆಹಲಿಯ ಬಿಜೆಪಿ ಕಚೇರಿಯಲ್ಲಿ ಅರುಣ್ ಜೇಟ್ಲಿ ಅವರು ಪಕ್ಷಕ್ಕೆ ಬರಮಾಡಿಕೊಂಡರು–ಪಿಟಿಐ ಚಿತ್ರ   

ನವದೆಹಲಿ: ಆಮ್ ಆದ್ಮಿ ಪಕ್ಷದಿಂದ (ಎಎಪಿ) ಉಚ್ಚಾಟನೆಗೊಂಡಿದ್ದ ಪಂಜಾಬ್‌ ಸಂಸದ ಹರೀಂದರ್ ಸಿಂಗ್ ಖಾಲ್ಸಾ ಅವರು ಗುರುವಾರ ಬಿಜೆಪಿಗೆ ಸೇರ್ಪಡೆಯಾದರು.

ಫತೇಗಡ ಸಾಹಿಬ್ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಅವರು ಕೇಂದ್ರ ಸಚಿವ ಅರುಣ್ ಜೇಟ್ಲಿ ಸಮ್ಮುಖದಲ್ಲಿ ಕಮಲ ಪಾಳಯ ಸೇರಿದರು. ಪರಿಶಿಷ್ಟ ಜಾತಿಗೆ ಸೇರಿರುವ ಖಾಲ್ಸಾ 2014ರ ಚುನಾವಣೆಯಲ್ಲಿ ಎಎಪಿ ಟಿಕೆಟ್‌ನಲ್ಲಿ ಗೆದ್ದಿದ್ದರು. 2015ರಲ್ಲಿ ಪಕ್ಷ ಇವರನ್ನು ಉಚ್ಚಾಟಿಸಿತ್ತು. ಬಿಜೆಪಿ ಮಿತ್ರಪಕ್ಷ ಶಿರೋಮಣಿ ಅಕಾಲಿದಳದ ಮೂಲಕ ಖಾಲ್ಸಾ ಅವರು ರಾಜಕೀಯ ಜೀವನ ಆರಂಭಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT