ಕುರುಕ್ಷೇತ್ರ: ರಾಜ್ಯದಲ್ಲಿ ಕಾಗದರಹಿತ ನೋಂದಣಿ ವ್ಯವಸ್ಥೆ ಜಾರಿಗೆ ತಂದಿದ್ದು, ಕಂದಾಯ ಇಲಾಖೆಯಲ್ಲಿ ಭ್ರಷ್ಟಾಚಾರ ತೊಡೆದುಹಾಕಲು ಇದೊಂದು ಮಹತ್ವದ ಹೆಜ್ಜೆಯಾಗಿದೆ ಎಂದು ಹರಿಯಾಣ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಹೇಳಿದ್ದಾರೆ.
ಮಾನವ ಹಸ್ತಕ್ಷೇಪವನ್ನು ಕಡಿಮೆ ಮಾಡುವ ಮೂಲಕ, ವಾಸ್ತವಿಕವಾಗಿ ದುಷ್ಕೃತ್ಯದ ಅವಕಾಶಗಳನ್ನು ತೆಗೆದುಹಾಕಲಾಗುತ್ತಿದೆ ಎಂದು ಅವರು ಹೇಳಿದರು. ನೋಂದಣಿ ಕಾರ್ಯವು ಈಗ ಸಂಪೂರ್ಣವಾಗಿ ಡಿಜಿಟಲ್ ಆಗಿರುತ್ತದೆ. ಇದು ಸರ್ಕಾರದ 'ಕನಿಷ್ಠ ಸರ್ಕಾರ-ಗರಿಷ್ಠ ಆಡಳಿತ' ನೀತಿಯ ಉದಾಹರಣೆಯಾಗಿದೆ ಎಂದಿದ್ದಾರೆ.
ಕಾಗದದ ಬಳಕೆಯನ್ನು ಕಡಿಮೆ ಮಾಡುವ ಮೂಲಕ ಪರಿಸರವನ್ನು ಸಂರಕ್ಷಿಸಲು ಈ ಉಪಕ್ರಮವು ಸಹಾಯ ಮಾಡುತ್ತದೆ ಎಂದೂ ಮುಖ್ಯಮಂತ್ರಿ ತಿಳಿಸಿದ್ದಾರೆ.
ಕುರುಕ್ಷೇತ್ರದ ಲಾಡ್ವಾ ವಿಧಾನಸಭಾ ಕ್ಷೇತ್ರದ ಬಬೈನ್ ತಹಸಿಲ್‌ನಲ್ಲಿ ಕಂದಾಯ ಇಲಾಖೆಯ ನಾಲ್ಕು ಪ್ರಮುಖ ಡಿಜಿಟಲ್ ಉಪಕ್ರಮಗಳನ್ನು ಉದ್ಘಾಟಿಸಿ ಮಾತನಾಡಿದರು.
ಕಾಗದರಹಿತ ನೋಂದಣಿ ವ್ಯವಸ್ಥೆ, ಗಡಿ ಗುರುತಿಸುವಿಕೆ ಪೋರ್ಟಲ್, ವಾಟ್ಸಾಪ್ ಚಾಟ್‌ಬಾಟ್ ಮತ್ತು ಕಂದಾಯ ನ್ಯಾಯಾಲಯದ ಪ್ರಕರಣ ನಿರ್ವಹಣಾ ವ್ಯವಸ್ಥೆಯನ್ನು ಸಹ ಉದ್ಘಾಟಿಸಿದರು.
ಇದೇವೇಳೆ, ಮುಖ್ಯಮಂತ್ರಿಗಳು ಮಾಹಿತಿ ಕಿರುಪುಸ್ತಕವನ್ನು ಬಿಡುಗಡೆ ಮಾಡಿದರು. ಬಬೈನ್ ತಹಸಿಲ್‌ನಲ್ಲಿ ಮೊದಲ ಕಾಗದರಹಿತ ನೋಂದಣಿ ಮತ್ತು ಗಡಿ ಗುರುತಿಸುವಿಕೆ ಪ್ರಕ್ರಿಯೆಯನ್ನು ವೀಕ್ಷಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.