ADVERTISEMENT

ಪಟಾಕಿ ಮಾರಾಟಕ್ಕೆ ಎರಡು ಗಂಟೆ ನಿಗದಿ: ಹರಿಯಾಣ ಮುಖ್ಯಮಂತ್ರಿ ಎಂ.ಎಲ್‌.ಖಟ್ಟರ್‌

ಏಜೆನ್ಸೀಸ್
Published 8 ನವೆಂಬರ್ 2020, 12:33 IST
Last Updated 8 ನವೆಂಬರ್ 2020, 12:33 IST
ಮನೋಹರ್‌ ಲಾಲ್‌ ಖಟ್ಟರ್‌
ಮನೋಹರ್‌ ಲಾಲ್‌ ಖಟ್ಟರ್‌   

ಚಂಡೀಗಢ: ರಾಜ್ಯದಲ್ಲಿ ಮಾಲಿನ್ಯದ ಜೊತೆಗೆ ಕೋವಿಡ್‌ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪಟಾಕಿಗಳಿಗೆ ಸಂಬಂಧಿಸಿದಂತೆ ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗಿದೆ ಎಂದು ಹರಿಯಾಣ ಮುಖ್ಯಮಂತ್ರಿ ಮನೋಹರ್‌ ಲಾಲ್‌ ಖಟ್ಟರ್‌ ಹೇಳಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ಅವರು, 'ರಾಜ್ಯದಲ್ಲಿ ಮಾಲಿನ್ಯದ ಜೊತೆಗೆ ಕೋವಿಡ್‌ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪಟಾಕಿಗಳಿಗೆ ಸಂಬಂಧಿಸಿದಂತೆ ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗಿದೆ. ಆದರೂ, ಪಟಾಕಿಗಳನ್ನು ಮಾರಾಟ ಮಾಡಲು ಮತ್ತು ಅವುಗಳನ್ನು ಸಿಡಿಸಲು ಬಯಸುವವರಿಗೆ ಎರಡು ಗಂಟೆ ಸಮಯವನ್ನು ನಿಗದಿ ಪಡಿಸಲಾಗುವುದು. ನಿಗದಿಪಡಿಸಿದ ಎರಡು ಗಂಟೆಗಳಲ್ಲಿ ವ್ಯಾಪಾರಿಗಳು ಪಟಾಕಿಗಳನ್ನು ಮಾರಾಟ ಮಾಡಬಹುದು' ಎಂದು ತಿಳಿಸಿದ್ದಾರೆ.

ಹೆಚ್ಚುತ್ತಿರುವ ಕೋವಿಡ್‌ ಪ್ರಕರಣಗಳ ಹಿನ್ನೆಲೆಯಲ್ಲಿ ರಾಜಸ್ಥಾನ, ಪಶ್ಚಿಮ ಬಂಗಾಳ, ದೆಹಲಿ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಪಟಾಕಿ ನಿಷೇಧಿಸಿ ಆದೇಶ ಹೊರಡಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.