ವೈ.ಪೂರನ್ ಕುಮಾರ್
ಚಂಡೀಗಢ: ಹರಿಯಾಣದ ಐಪಿಎಸ್ ಅಧಿಕಾರಿ ವೈ.ಪೂರನ್ ಕುಮಾರ್ (52) ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಪತ್ನಿ ಹಾಗೂ ಐಎಎಸ್ ಅಧಿಕಾರಿ ಅಮ್ನೀತ್ ಅವರು ಪ್ರತಿಕ್ರಿಯೆ ನೀಡಿದ್ದಾರೆ.
ನನ್ನ ಪತಿ ಸಾವಿಗೆ ಹಿರಿಯ ಅಧಿಕಾರಿಗಳ ವ್ಯವಸ್ಥಿತ ಕಿರುಕುಳವೇ ಕಾರಣ ಎಂದು ಅವರು ಆರೋಪಿಸಿದ್ದಾರೆ.
ಈ ಕುರಿತು ಅವರು ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆ ಹಾಗೂ ಆತ್ಮಹತ್ಯೆಗೆ ಪ್ರಚೋದನೆ ಅಡಿ ದೂರು ದಾಖಲಿಸಿ ಹರಿಯಾಣದ 13 ಹಿರಿಯ ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ ನಡೆಸಲು ಮನವಿ ಮಾಡಿದ್ದಾರೆ.
ಪೂರನ್ ಕುಮಾರ್ ಚಂಡೀಗಢದ ತಮ್ಮ ನಿವಾಸದಲ್ಲಿ ಮಂಗಳವಾರ ಪಿಸ್ತೂಲ್‌ನಿಂದ ಗುಂಡು ಹಾರಿಸಿಕೊಂಡು ಆತ್ಯಹತ್ಮೆ ಮಾಡಿಕೊಂಡಿದ್ದರು.
2001ನೇ ಬ್ಯಾಚಿನ ಐಪಿಎಸ್ ಅಧಿಕಾರಿಯಾಗಿದ್ದ ಅವರು, ರೋಹಟಕ್‌ನ ಸುನರಿಯಾದ ಪೊಲೀಸ್ ತರಬೇತಿ ಕೇಂದ್ರದ ‘ಐಜಿಪಿ’ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಇಲ್ಲಿಗೆ ವರ್ಗಾವಣೆ ಆಗಿ ಬರುವ ಮುನ್ನ ಅವರು ರೋಹಟಕ್ ವಲಯದ ಐಜಿಪಿ ಆಗಿದ್ದರು.
ಪೂರನ್ ಪತ್ನಿ ಅಮ್ನೀತ್ ಪಿ. ಕುಮಾರ್ ಐಎಎಸ್ ಅಧಿಕಾರಿಯಾಗಿದ್ದಾರೆ.
‘ಮಂಗಳವಾರ ಮಧ್ಯಾಹ್ನ ಪೊಲೀಸರು ಸೆಕ್ಟರ್ 11ರಲ್ಲಿರುವ ಪೂರನ್ ಅವರ ನಿವಾಸಕ್ಕೆ ಧಾವಿಸಿದರು. ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ’ ಎಂದು ಚಂಡೀಗಢದ ಪೊಲೀಸ್ ವರಿಷ್ಠಾಧಿಕಾರಿ ಕನ್ವರ್‌ದೀಪ್ ಕೌರ್ ಸುದ್ದಿಗಾರರಿಗೆ ತಿಳಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.