ADVERTISEMENT

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಹರಿಯಾಣ ಮಾಜಿ ಸಿಎಂ ಮನೋಹರ್‌ಲಾಲ್ ಖಟ್ಟರ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 13 ಮಾರ್ಚ್ 2024, 10:12 IST
Last Updated 13 ಮಾರ್ಚ್ 2024, 10:12 IST
<div class="paragraphs"><p>ಮನೋಹರ್ ಲಾಲ್ ಖಟ್ಟರ್</p></div>

ಮನೋಹರ್ ಲಾಲ್ ಖಟ್ಟರ್

   

(ಪಿಟಿಐ ಚಿತ್ರ)

ಬೆಂಗಳೂರು: ಹರಿಯಾಣ ಮುಖ್ಯಮಂತ್ರಿ ಸ್ಥಾನ ತೊರೆದ ಮರುದಿನವೇ ಮನೋಹರ್‌ಲಾಲ್ ಖಟ್ಟರ್ ಅವರು ಇಂದು (ಬುಧವಾರ) ಶಾಸಕ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ.

ADVERTISEMENT

ವಿಧಾನಸಭೆಯಲ್ಲಿ ಮಾತನಾಡಿದ ಅವರು, ‘ಕರ್ನಾಲ್ ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನಕ್ಕೆ ನಾನು ರಾಜೀನಾಮೆ ಘೋಷಿಸುತ್ತಿದ್ದೇನೆ. ನೂತನ ಮುಖ್ಯಮಂತ್ರಿ ನಯಾಬ್ ಸೈನಿ ಅವರು ಕರ್ನಾಲ್ ವಿಧಾನಸಭಾ ಕ್ಷೇತ್ರದ ಹೊಣೆಯನ್ನು ಹೊತ್ತುಕೊಳ್ಳಲಿದ್ದಾರೆ’ ಎಂದು ಅವರು ಹೇಳಿದರು.

2014ರಿಂದ ಖಟ್ಟರ್‌ ಅವರು ಈ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. ಅವರ ರಾಜೀನಾಮೆಗೆ ಸೂಕ್ತ ಕಾರಣ ತಿಳಿದು ಬಂದಿಲ್ಲ. ಮೂಲಗಳ ಪ್ರಕಾರ ಅವರನ್ನು ಕರ್ನಾಲ್ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಕಣಕ್ಕಿಳಿಸಲಿದೆ ಎನ್ನಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.