ಚಂಡೀಗಢ: ವೃದ್ಧ ತಂದೆ–ತಾಯಿಯ ಬಗ್ಗೆ ಮಗ ನಿರ್ಲಕ್ಷ್ಯ ವಹಿಸಿರುವ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಹರಿಯಾಣ ಮಾನವ ಹಕ್ಕುಗಳ ಆಯೋಗವು ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ.
96 ವರ್ಷದ ವ್ಯಕ್ತಿಯು ತನ್ನ ಪತ್ನಿಯೊಂದಿಗೆ(86) ಗುರುಗ್ರಾಮದಲ್ಲಿ ಫ್ಲ್ಯಾಟ್ ಒಂದರಲ್ಲಿ ವಾಸಿಸುತ್ತಿದ್ದಾರೆ.
ಸ್ಥಳೀಯ ನಿವಾಸಿಗಳು ಮತ್ತು ರೆಸಿಡೆನ್ಷಿಯಲ್ ಸೊಸೈಟಿಯ ಪ್ರತಿನಿಧಿಗಳು ದೂರು ನೀಡಿದ ಬೆನ್ನಲ್ಲೇ ಆಯೋಗವು ವೃದ್ಧ ದಂಪತಿಯ ಆರೋಗ್ಯ, ಮಾನಸಿಕ ಮತ್ತು ಸಾಮಾಜಿಕ ಸ್ಥಿತಿಗತಿಯ ಬಗ್ಗೆ ಪರಿಶೀಲನೆ ನಡೆಸಿ, ಕೈಗೊಂಡಿರುವ ಕ್ರಮಗಳ ಬಗ್ಗೆ ಜುಲೈ 3ರ ಒಳಗಾಗಿ ಈ ಬಗ್ಗೆ ವರದಿ ನೀಡುವಂತೆ ಜಿಲ್ಲಾಡಳಿತ ಮತ್ತು ಆರೋಗ್ಯ ಅಧಿಕಾರಿಗಳಿಗೆ ತುರ್ತು ನಿರ್ದೇಶನ ನೀಡಿದೆ.
ತರಬೇತಿ ಪಡೆಯದ ಸಹಾಯಕಿಯರೊಂದಿಗೆ ಸೂಕ್ತ ವೈದ್ಯಕೀಯ ಮೇಲ್ವಿಚಾರಣೆಯಿಲ್ಲದೆ ವೃದ್ಧ ದಂಪತಿ ಜೀವನ ನಡೆಸುತ್ತಿದ್ದಾರೆ. ಅವರನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.