ಪ್ರಾತಿನಿಧಿಕ ಚಿತ್ರ
– ಗೆಟ್ಟಿ ಚಿತ್ರ
ನೂಹ್: ತನ್ನ 8 ವರ್ಷದ ಸೊಸೆಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ಆರೋಪದಲ್ಲಿ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
27 ವರ್ಷದ ಆರೋಪಿಯನ್ನು ಶುಕ್ರವಾರ ಬಂಧಿಸಲಾಗಿದ್ದು, ಬಾಲಕಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿ ಹೊಲವೊಂದರಲ್ಲಿ ಹೂತು ಹಾಕಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಹೊಲಕ್ಕೆ ಬಾಲಕಿಯನ್ನು ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾಗಿಯೂ, ಆಕೆ ಅಳಲು ಶುರುವಿಟ್ಟಾಗ ತನ್ನ ಕೈಗಳಿಂದ ಆಕೆಯ ಬಾಯಿಯನ್ನು ಮುಚ್ಚಿದ್ದರಿಂದ ಉಸಿರುಗಟ್ಟಿ ಆಕೆ ಮೃತಪಟ್ಟಿದಾಗಿಯೂ ಆರೋಪಿ ವಿಚಾರಣೆ ವೇಳೆ ಹೇಳಿದ್ದಾಗಿ ಪೊಲೀಸರು ಹೇಳಿದ್ದಾರೆ.
ಬಳಿಕ ಆಕೆಯನ್ನು ಅಲ್ಲೇ ಹೂತು ಹಾಕಿದ್ದಾನೆ.
ಮನೆಯ ಬಳಿ ಇತರ ಮಕ್ಕಳೊಂದಿಗೆ ಆಟವಾಡುತ್ತಿದ್ದ ಆಕೆ ಬುಧವಾರ ಕಾಣೆಯಾಗಿದ್ದಳು ಎಂದು ಪೊಲೀಸರು ನೀಡಿದ ಮಾಹಿತಿ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.