ಸಾಂದರ್ಭಿಕ ಚಿತ್ರ
–ಪಿಟಿಐ ಚಿತ್ರ
ಚಂಡೀಗಢ: ಜನನಾಯಕ್ ಜನತಾ ಪಕ್ಷ (ಜೆಜೆಪಿ) ಮತ್ತು ಆಜಾದ್ ಸಮಾಜ್ ಪಕ್ಷಗಳ (ಎಎಸ್‌ಪಿ) ಮೈತ್ರಿಯು ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ 18 ಅಭ್ಯರ್ಥಿಗಳನ್ನು ಒಳಗೊಂಡ ಮೂರನೇ ಪಟ್ಟಿಯನ್ನು ಬುಧವಾರ ಬಿಡುಗಡೆ ಮಾಡಿದೆ.
ಈ ಪೈಕಿ ಜೆಜೆಪಿ 15 ಮತ್ತು ಎಎಸ್‌ಪಿ ಮೂವರನ್ನು ಕಣಕ್ಕಿಳಿಸಿದೆ.
ಇತ್ತೀಚೆಗೆ ಬಿಜೆಪಿಯನ್ನು ತೊರೆದ ಮಾಜಿ ಸಚಿವ ರಂಜಿತ್ ಸಿಂಗ್ ಚೌಟಾಲಾ ಅವರಿಗೆ ರಾನಿಯಾ ಕ್ಷೇತ್ರವನ್ನು ಬಿಟ್ಟುಕೊಡಲು ಎರಡೂ ಪಕ್ಷಗಳು ನಿರ್ಧರಿಸಿವೆ. ಚೌಟಾಲಾ ಅವರು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.