ADVERTISEMENT

ರೈತರ ಪ್ರತಿಭಟನೆ: ಪಂಜಾಬ್‌, ಹರಿಯಾಣ ಸಿ.ಎಂಗಳ ವಾಗ್ವಾದ

​ಪ್ರಜಾವಾಣಿ ವಾರ್ತೆ
Published 30 ಆಗಸ್ಟ್ 2021, 19:45 IST
Last Updated 30 ಆಗಸ್ಟ್ 2021, 19:45 IST
ಮನೋಹರ್‌
ಮನೋಹರ್‌   

ನವದೆಹಲಿ: ಕೃಷಿ ಕಾಯ್ದೆಗಳನ್ನು ವಿರೋಧಿಸಿ ಕರ್ನಾಲ್‌ನಲ್ಲಿ ರೈತರು ನಡೆಸಿದ ಪ್ರತಿಭಟನೆ ವಿಷಯ ಈಗ ಪಂಜಾಬ್‌ ಮತ್ತು ಹರಿಯಾಣ ಮುಖ್ಯಮಂತ್ರಿಗಳ ವಾಗ್ವಾದಕ್ಕೆ ಕಾರಣವಾಗಿದೆ.

ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ರೈತರ ವಿರುದ್ಧ ಕಠಿಣ ಕ್ರಮ ಅಗತ್ಯವಾಗಿತ್ತು ಎಂದು ಹೇಳಿಕೆ ನೀಡಿರುವ ಹರಿಯಾಣ ಮುಖ್ಯಮಂತ್ರಿ ಮನೋಹರ್‌ ಲಾಲ್‌ ಖಟ್ಟರ್‌ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಪಂಜಾಬ್‌ ಮುಖ್ಯಮಂತ್ರಿ ಅಮರಿಂದ್ರ ಸಿಂಗ್‌ ಒತ್ತಾಯಿಸಿದ್ದಾರೆ.

‘ಹರಿಯಾಣದ ಬಿಜೆಪಿ–ಜೆಜೆಪಿ ಸರ್ಕಾರ ರೈತ ವಿರೋಧಿಯಾಗಿದೆ. ಶಾಂತಿಯುತವಾಗಿ ಪ‍್ರತಿಭಟನೆ ನಡೆಸುತ್ತಿರುವವರ ಮೇಲೆ ಸರ್ಕಾರವೇ ಪೊಲೀಸ್‌ರಿಂದ ಹಲ್ಲೆ ನಡೆಸಿದೆ.’ ಎಂದು ಕಿಡಿಕಾರಿದ್ದಾರೆ.

ADVERTISEMENT

ಈ ಬಗ್ಗೆ ಪ್ರತಿಕ್ರಿಯಿಸಿರುವ ಖಟ್ಟರ್‌ ಅವರು, ‘ನನ್ನ ರಾಜೀನಾಮೆ ಕೇಳಲು ಅವರು ಯಾರು? ದೆಹಲಿಯಲ್ಲಿ ಪಂಜಾ
ಬ್‌ ರೈತರು ಪ್ರತಿಭಟನೆ ಮಾಡುತ್ತಿರುವುದರಿಂದ ಅವರೇ ರಾಜೀನಾಮೆ ನೀಡಲಿ’ ಎಂದು ಹೇಳಿದ್ದಾರೆ.’

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.