ಜ್ಯೋತಿ ಮಲ್ಹೋತ್ರಾ
ಚಂಡೀಗಢ: ಬೇಹುಗಾರಿಕೆ ಪ್ರಕರಣದಲ್ಲಿ ಬಂಧನವಾಗಿರುವ ಹರಿಯಾಣದ ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾರನ್ನು ಪಾಕಿಸ್ತಾನದ ಗುಪ್ತಚರವು ಪ್ರಮುಖ ’ಆಸ್ತಿ‘ಯನ್ನಾಗಿ ಬಳಸಿಕೊಳ್ಳುತ್ತಿತ್ತು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಭಾನುವಾರ ಹೇಳಿದ್ದಾರೆ.
ಹಿಸಾರ್‌ನಲ್ಲಿ ಪತ್ರಕರ್ತರನ್ನು ಉದ್ದೇಶಿಸಿ ಮಾತನಾಡಿದ ಹಿರಿಯ ಪೊಲೀಸ್ ಅಧಿಕಾರಿ ಶಶಾಂಕ್ ಕುಮಾರ್ ಸಾವನ್, ‘ಏಪ್ರಿಲ್ 22ರ ಪಹಲ್ಗಾಮ್ ದಾಳಿಯ ಬಳಿಕ ಭಾರತ ಮತ್ತು ಪಾಕಿಸ್ತಾನ ನಡುವೆ ಸೇನಾ ಬಿಕ್ಕಟ್ಟು ಉದ್ಭವಿಸಿದ್ದ ಸಂದರ್ಭದಲ್ಲಿ ಜ್ಯೋತಿ ಮಲ್ಹೋತ್ರಾ ನವದೆಹಲಿಯಲ್ಲಿರುವ ಪಾಕಿಸ್ತಾನದ ಹೈಕಮಿಷನ್ ಅಧಿಕಾರಿಯೊಬ್ಬರ ಜೊತೆ ಸಂಪರ್ಕದಲ್ಲಿದ್ದರು’ ಎಂದಿದ್ದಾರೆ.
ಪ್ರಸ್ತುತ ಸಂದರ್ಭದಲ್ಲಿ ಪಾಕಿಸ್ತಾನದ ಜೊತೆ ಹಂಚಿಕೊಂಡಿರಬಹುದಾದ ಸೇನೆ ಮತ್ತು ಭದ್ರತಾ ಕಾರ್ಯಾಚರಣೆಗಳ ಕುರಿತು ಯಾವುದೇ ಮಾಹಿತಿ ಆಕೆಯ ಬಳಿ ಇಲ್ಲ. ಆದರೆ, ಪಾಕಿಸ್ತಾನದ ಗುಪ್ತಚರದ ಜೊತೆ ಆಕೆ ನೇರ ಸಂಪರ್ಕದಲ್ಲಿದ್ದರು. ಪಾಕಿಸ್ತಾನ ಗುಪ್ತಚರವು ಆಕೆಯನ್ನು ತನ್ನ ’ಆಸ್ತಿ‘ಯನ್ನಾಗಿ ಬಳಸಿಕೊಳ್ಳುತ್ತಿತ್ತು. ಆಕೆಯ ಜೊತೆ ನಂಟು ಹೊಂದಿರುವ ಇತರ ಯೂಟ್ಯೂಬರ್‌ಗಳು ಪಾಕ್ ಗುಪ್ತಚರದೊಂದಿಗೆ ಸಂಪರ್ಕದಲ್ಲಿದ್ದರು. ಇದೂ ಒಂದು ರೀತಿಯ ಯುದ್ಧ ಎಂದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.