ADVERTISEMENT

ಹರಿಯಾಣ ಜಿಲ್ಲಾ ಪರಿಷತ್‌ ಚುನಾವಣೆ: ಬಿಜೆಪಿ ಕಳಪೆ ಪ್ರದರ್ಶನ, ಎಎಪಿ 2ನೇ ಸ್ಥಾನ

ಪಿಟಿಐ
Published 28 ನವೆಂಬರ್ 2022, 13:42 IST
Last Updated 28 ನವೆಂಬರ್ 2022, 13:42 IST
.
.   

ಚಂಡೀಗಢ: ಹರಿಯಾಣ ಜಿಲ್ಲಾ ಪರಿಷತ್‌ಗೆ ನಡೆದ ಚುನಾವಣೆಯಲ್ಲಿ ಸ್ಪರ್ಧಿಸಿದ್ದ 100 ಸ್ಥಾನಗಳ ಪೈಕಿ ಕೇವಲ 22 ಸ್ಥಾನಗಳಲ್ಲಿ ಮಾತ್ರ ಗೆಲ್ಲುವ ಮೂಲಕ ಬಿಜೆಪಿ ಕಳಪೆ ಪ್ರದರ್ಶನ ತೋರಿದೆ.

15 ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ಎಎಪಿ ಎರಡನೇ ಸ್ಥಾನದಲ್ಲಿದೆ. ಎಎಪಿ ಕೂಡ 100 ಸ್ಥಾನಗಳಲ್ಲಿ ಸ್ಪರ್ಧಿಸಿತ್ತು.

‘ಈ ಚುನಾವಣೆಯ ಫಲಿತಾಂಶವು ರಾಜ್ಯದಲ್ಲಿ 2024ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೂ ಮುನ್ನ ಬಿಜೆಪಿಗೆ ಎಚ್ಚರಿಕೆಯ ಗಂಟೆಯಾಗಿದೆ’ ಎಂದು ರಾಜಕೀಯ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ADVERTISEMENT

ರಾಜ್ಯದ ಇತರ ಜಿಲ್ಲೆಗಳಲ್ಲಿ ಬಿಜೆಪಿ ಬೆಂಬಲಿತ 150ಕ್ಕೂ ಹೆಚ್ಚು ಅಭ್ಯರ್ಥಿಗಳು ಗೆದ್ದಿದ್ದಾರೆ ಎಂದು ಹರಿಯಾಣದ ಬಿಜೆಪಿ ವಕ್ತಾರರು ತಿಳಿಸಿದ್ದಾರೆ.

ಕಾಂಗ್ರೆಸ್ ಮತ್ತು ಬಿಜೆಪಿಯ ಮಿತ್ರ ಪಕ್ಷವಾದ ಜನನಾಯಕ ಜನತಾ ಪಾರ್ಟಿಯು ಚುನಾವಣೆಯಲ್ಲಿ ಪಕ್ಷದ ಚಿಹ್ನೆಯಲ್ಲಿ ಸ್ಪರ್ಧಿಸಿರಲಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.