ADVERTISEMENT

ಕೋರ್ಟ್ ಮೇಲುಸ್ತುವಾರಿಯಲ್ಲಿ ಹಾಥರಸ್ ಪ್ರಕರಣದ ತನಿಖೆ: ನಾಳೆ ‘ಸುಪ್ರೀಂ‌‘ ತೀರ್ಪು

ಪಿಟಿಐ
Published 26 ಅಕ್ಟೋಬರ್ 2020, 16:16 IST
Last Updated 26 ಅಕ್ಟೋಬರ್ 2020, 16:16 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ನವದೆಹಲಿ: ಹಾಥರಸ್‌ನ ಸಾಮೂಹಿಕ ಅತ್ಯಾಚಾರ ಪ್ರಕರಣದ ತನಿಖೆಯುಕೋರ್ಟ್‌ ಮೇಲುಸ್ತುವಾರಿಯಲ್ಲಿಯೇ ನಡೆಯಬೇಕು ಎಂದು ಕೋರಿ ಸಲ್ಲಿಸಲಾಗಿರುವ ವಿವಿಧ ಅರ್ಜಿಗಳಿಗೆ ಸಂಬಂಧಿಸಿ ಸುಪ್ರೀಂ ಕೋರ್ಟ್ ಮಂಗಳವಾರ ತೀರ್ಪು ನೀಡಲಿದೆ.

ಮುಖ್ಯ ನ್ಯಾಯಮೂರ್ತಿ ಎಸ್‌.ಎ.ಬೊಬಡೆ ನೇತೃತ್ವದ ಮೂವರು ಸದಸ್ಯರ ಪೀಠವು ಈ ಕುರಿತ ತೀರ್ಪನ್ನು ಅಕ್ಟೋಬರ್ 15ರಂದು ಕಾಯ್ದಿರಿಸಿತ್ತು. ಉತ್ತರ ಪ್ರದೇಶದಲ್ಲಿ ನ್ಯಾಯಸಮ್ಮತವಾದ ತನಿಖೆ, ವಿಚಾರಣೆ ಸಾಧ್ಯವಿಲ್ಲ ಎಂದು ಅರ್ಜಿಗಳಲ್ಲಿ ಸಾಮಾಜಿಕ ಕಾರ್ಯಕರ್ತರು, ವಕೀಲರು ವಾದ ಮಂಡಿಸಿದ್ದರು.

ಕಾರ್ಯಕರ್ತೆ, ವಕೀಲರಾದ ಇಂದಿರಾ ಜೈಸಿಂಗ್ ಕೂಡಾ ಇಂಥದೇ ಆತಂಕವನ್ನು ವ್ಯಕ್ತಪಡಿಸಿದ್ದರು. ತನಿಖೆ ಪೂರ್ಣಗೊಂಡ ನಂತರದ ಪ್ರಕರಣದ ವಿಚಾರಣೆಯನ್ನು ನವದೆಹಲಿಗೆ ವರ್ಗಾಹಿಸಬೇಕು ಎಂದು ಸಂತ್ರಸ್ತೆಯ ಕುಟುಂಬದ ಪರವಾಗಿ ಹಾಜರಿದ್ದ ವಕೀಲರು ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.