ADVERTISEMENT

ಅತ್ಯಾಚಾರ ಖಂಡಿಸಿ ಸಮಾಜವಾದಿ ಪಕ್ಷದ ಕಾರ್ಯಕರ್ತರ ಪ್ರತಿಭಟನೆ: ಲಾಠಿ ಪ್ರಹಾರ‌

ಪಿಟಿಐ
Published 2 ಅಕ್ಟೋಬರ್ 2020, 10:00 IST
Last Updated 2 ಅಕ್ಟೋಬರ್ 2020, 10:00 IST
ಸಮಾಜವಾದಿ ಪಕ್ಷದ ಕಾರ್ಯಕರ್ತರ ಮೇಲೆ ಲಾಠಿ ಚಾರ್ಜ್‌ ನಡೆಸುತ್ತಿರುವ ಪೊಲೀಸರು
ಸಮಾಜವಾದಿ ಪಕ್ಷದ ಕಾರ್ಯಕರ್ತರ ಮೇಲೆ ಲಾಠಿ ಚಾರ್ಜ್‌ ನಡೆಸುತ್ತಿರುವ ಪೊಲೀಸರು   

ಲಖನೌ:ಹಾಥರಸ್‌ ಸಾಮೂಹಿಕ ಅತ್ಯಾಚಾರ ಮತ್ತು ಕೃಷಿ ಮಸೂದೆ ಖಂಡಿಸಿಸಮಾಜವಾದಿ ಪಕ್ಷದ ಕಾರ್ಯಕರ್ತರು ಶುಕ್ರವಾರ ಪ್ರತಿಭಟನಾ ಮೆರವಣಿಗೆ ನಡೆಸಿದ ವೇಳೆ ಪೊಲೀಸರು ಲಾಠಿ ಪ್ರಹಾರ ನಡೆಸಿದರು.

ಪಕ್ಷದ ಕಚೇರಿಯಿಂದ ನಗರದ ಗಾಂಧಿ ಪ್ರತಿಮೆ ಇರುವ ಸ್ಥಳದ ತನಕಪ್ರತಿಭಟನಾ ಮೆರವಣಿಗೆಯನ್ನು ನಡೆಸಿ, ಅಲ್ಲಿ ಮೌನ ವ್ರತವನ್ನು ಕೈಗೊಳ್ಳಲು ನಿರ್ಧರಿಸಲಾಗಿತ್ತು. ಆದರೆ ಪಕ್ಷದ ಕಾರ್ಯಕರ್ತರು ಹಜ್ರರತ್‌ಗಂಜ್‌ನಲ್ಲಿ ಹಾಕಲಾಗಿದ್ದ ಬ್ಯಾರಿಕೇಡರ್‌ಗಳನ್ನು ದಾಟಿ ಒಳ ನುಗ್ಗಲು ಪ್ರವೇಶಿಸಿದಾಗ ಪೊಲೀಸರು ಅವರನ್ನು ತಡೆದರು.ಈ ವೇಳೆ ಪೊಲೀಸರು ಮತ್ತು ಪ್ರತಿಭಟನಕಾರರ ನಡುವೆ ಮಾತಿನ ಚಕಮಕಿನಡೆದಿದೆ. ಪರಿಸ್ಥಿತಿ ಹತೋಟಿಗೆ ಬರದ ಕಾರಣ ಪೊಲೀಸರು ಲಾಠಿ ಪ್ರಹಾರ‌ ನಡೆಸಿದ್ದಾರೆ ಎನ್ನಲಾಗಿದೆ.

ಹಾಥರಸ್‌ ಮಗಳಿಗೆ ನ್ಯಾಯ ಒದಗಿಸಲು ಮೌನ ವ್ರತ ವಹಿಸಲು ಮುಂದಾಗಿದ್ದ ನಾಯಕರನ್ನು ಪೊಲೀಸರು ಬಂಧಿಸಿದರು. ಈ ಮೂಲಕ ಮಹಾತ್ಮ ಗಾಂಧೀಜಿ ಮತ್ತು ಲಾಲ್‌ ಬಹದ್ದೂರ್‌ ಶಾಸ್ತ್ರಿ ಅವರ ಜನ್ಮದಿನದಂದು ಸತ್ಯದ ಧ್ವನಿಯನ್ನು ಹಿಸುಕಲಾಗಿದೆ ಎಂದು ಸಮಾಜವಾದಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಖಿಲೇಶ್‌ ಯಾದವ್‌ ಆಕ್ರೋಶ ವ್ಯಕ್ತಪಡಿಸಿದರು.

ADVERTISEMENT

ಪೊಲೀಸರುಶಾಂತಿಯುತವಾಗಿ ಸಾಗುತ್ತಿದ್ದಮೆರವಣಿಗೆಯನ್ನು ಉತ್ತರ ಪ್ರದೇಶದ ಮುಖ್ಯಮಂತ್ರಿ ಅವರ ಸೂಚನೆ ಮೇರೆಗೆ ತಡೆದಿದ್ದಾರೆ. ಮುಖ್ಯಮಂತ್ರಿ ಅವರು ಪ್ರಜಾಪ್ರಭುತ್ವದ ಹತ್ಯೆಗೈದಿದ್ದಾರೆ. ಈ ಕೂಡಲೇ ಜಿಲ್ಲಾಧಿಕಾರಿ‌ ಮತ್ತು ಹಾಥರಸ್‌ನ ಎಸ್‌ಪಿ ವಿರುದ್ಧ ಎಫ್‌ಐಆರ್‌ ದಾಖಲಿಸಬೇಕು ಎಂದು ಅವರು ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.