ADVERTISEMENT

ಹಾಥರಸ್ ಅತ್ಯಾಚಾರ ಪ್ರಕರಣ ಸಿಬಿಐ ತನಿಖೆಗೆ ವಹಿಸಿದ ಯೋಗಿ ಆದಿತ್ಯನಾಥ್ ಸರ್ಕಾರ

ಏಜೆನ್ಸೀಸ್
Published 3 ಅಕ್ಟೋಬರ್ 2020, 15:38 IST
Last Updated 3 ಅಕ್ಟೋಬರ್ 2020, 15:38 IST
ಯೋಗಿ ಆದಿತ್ಯನಾಥ್ (ಸಂಗ್ರಹ ಚಿತ್ರ)
ಯೋಗಿ ಆದಿತ್ಯನಾಥ್ (ಸಂಗ್ರಹ ಚಿತ್ರ)   

ಲಖನೌ: ಹಾಥರಸ್ ಅತ್ಯಾಚಾರ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಶನಿವಾರ ಸಂಜೆ ಆದೇಶಿಸಿದ್ದಾರೆ.

ಈ ಕುರಿತು ಉತ್ತರ ಪ್ರದೇಶ ಮುಖ್ಯಮಂತ್ರಿಗಳ ಕಚೇರಿ ಮಾಹಿತಿ ನೀಡಿರುವುದಾಗಿ ಎಎನ್‌ಐ ಸುದ್ದಿಸಂಸ್ಥೆ ಟ್ವೀಟ್ ಮಾಡಿದೆ. ಅತ್ಯಾಚಾರ ಪ್ರಕರಣ ದೇಶದಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ ಉತ್ತರ ಪ್ರದೇಶ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.

ಎರಡು ವಾರಗಳ ಹಿಂದೆ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ 19 ವರ್ಷದ ಯುವತಿ ಸೆಪ್ಟೆಂಬರ್ 29ರಂದು ದೆಹಲಿಯ ಸಫ್ದರ್‌ಜಂಗ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಮೃತಪಟ್ಟ ಯುವತಿಯ ಅಂತ್ಯಕ್ರಿಯೆಯನ್ನು ಉತ್ತರ ಪ್ರದೇಶ ಪೊಲೀಸರು ನಡುರಾತ್ರಿಯಲ್ಲೇ ಮಾಡಿ ಮುಗಿಸಿದ್ದರು. ಅಂತ್ಯಕ್ರಿಯೆಗೆ ತೆರಳಲು ತಮಗೂ ಅವಕಾಶ ನೀಡಿರಲಿಲ್ಲ ಎಂದು ಸಂತ್ರಸ್ತೆಯ ಕುಟುಂಬ ಸದಸ್ಯರು ಆರೋಪಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದ ಎಲ್ಲ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ.

ADVERTISEMENT

ಇನ್ನಷ್ಟು...

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.