ಪಟ್ನಾ: ತಾವು ಪ್ರಧಾನಿ ಹುದ್ದೆಯ ಆಕಾಂಕ್ಷಿಯಲ್ಲ ಎಂದು ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಶುಕ್ರವಾರ ಪುನರುಚ್ಚರಿಸಿದ್ದಾರೆ.
'ನಾನು ಕೈ ಮುಗಿದು ಹೇಳುತ್ತೇನೆ. ಅಂತಹ (ಪ್ರಧಾನಿ) ಯಾವುದೇ ಆಲೋಚನೆಗಳಿಲ್ಲ. ವಿರೋಧ ಪಕ್ಷಗಳೆಲ್ಲ ಒಗ್ಗಟ್ಟಾಗಿ ಕೆಲಸ ಮಾಡಿಸಲುಪ್ರಯತ್ನ ಮಾಡುತ್ತೇನೆ. ಅದನ್ನು ಅವರೇ ಮಾಡಿದರೆ ಉತ್ತಮ' ಎಂದು ಹೇಳಿದ್ದಾರೆ.
ವಿರೋಧ ಪಕ್ಷಗಳನ್ನು ಒಗ್ಗೂಡಿಸುವುದರಲ್ಲಿ ತಮ್ಮ ಪಾತ್ರದ ಬಗ್ಗೆ ವಿವರಣೆ ನೀಡಿದ ನಿತೀಶ್, 'ನಾನು ಧನಾತ್ಮಕವಾಗಿ ಕೆಲಸ ಮಾಡುತ್ತಿದ್ದೇನೆ. ಸಾಕಷ್ಟು ದೂರವಾಣಿ ಕರೆಗಳು ಬರುತ್ತಿವೆ. ವಿಪಕ್ಷದಲ್ಲಿರುವ ಎಲ್ಲರನ್ನು ಒಗ್ಗೂಡಿಸಲು ಬಯಸುತ್ತೇನೆ. ನಾನು ಎಲ್ಲವನ್ನು ಮಾಡುತ್ತೇನೆ. ಆದರೆ ಮೊದಲು ನನ್ನ ಕೆಲಸವನ್ನು ಇಲ್ಲಿ ಮಾಡುತ್ತೇನೆ' ಎಂದು ಹೇಳಿದರು.
ಬಿಜೆಪಿ ಜೊತೆಗಿನ ಮೈತ್ರಿ ಕಡಿದುಕೊಂಡಿರುವ ನಿತೀಶ್ ಕುಮಾರ್, ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಬಳಿಕ ಮಹಾಘಟಬಂಧನದಲ್ಲಿ ಗುರುತಿಸಿಕೊಂಡಿರುವ ಪಕ್ಷಗಳ ಬೆಂಬಲದೊಂದಿಗೆ ಮತ್ತೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.