
ಪಿಟಿಐ
ಚೆನ್ನೈ: ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು, ‘ಭ್ರಷ್ಟಾಚಾರದ ಪ್ರಕರಣಗಳಲ್ಲಿ ಭಾಗಿಯಾಗಿರುವ ಎಐಎಡಿಎಂಕೆ ಪಕ್ಷವು ನಿಮ್ಮ ‘ವಾಷಿಂಗ್ ಮಷಿನ್’ನಲ್ಲಿ ಸ್ವಚ್ಛಗೊಂಡಿದೆಯೇ’ ಎಂದು ಪ್ರಶ್ನಿಸಿದ್ದಾರೆ.
ಎನ್‌ಡಿಟಿವಿ ತಮಿಳುನಾಡು ಶೃಂಗಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ‘ಬಿಜೆಪಿಯು ಡಿಎಂಕೆ ಪಕ್ಷದ ವಿರುದ್ಧ ಆಧಾರರಹಿತ ಆರೋಪಗಳನ್ನು ಮಾಡುತ್ತಿದೆ. ತಮಿಳುನಾಡಿನ ಬೆಳವಣಿಗೆಯನ್ನು ಅರಗಿಸಿಕೊಳ್ಳಲು ಸಾಧ್ಯವಾಗದವರು ‘ವಾಟ್ಸ್‌ಆ್ಯಪ್ ವಿಶ್ವವಿದ್ಯಾಲಯ’ದ ಮೂಲಕ ಸುಳ್ಳುಗಳನ್ನು ಹರಡುತ್ತಿದ್ದಾರೆ’ ಎಂದು ಆರೋಪಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.