ADVERTISEMENT

ದೆಹಲಿ: ಕೋವಿಡ್‌ ರೋಗಿಗಳಿಗೆ ಹಾಸಿಗೆ ಮೀಸಲಿಡಲು ಅನುಮತಿ

33 ಖಾಸಗಿ ಆಸ್ಪತ್ರೆಗಳಲ್ಲಿ ಶೇ 80ರಷ್ಟು ಐಸಿಯು ಹಾಸಿಗೆ

ಪಿಟಿಐ
Published 12 ನವೆಂಬರ್ 2020, 12:06 IST
Last Updated 12 ನವೆಂಬರ್ 2020, 12:06 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ 33 ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್‌ 19 ರೋಗಿಗಳಿಗಾಗಿ ಶೇ 80ರಷ್ಟು ತುರ್ತು ನಿಗಾ ಘಟಕಗಳ ಹಾಸಿಗೆಗಳನ್ನು(ಐಸಿಯು ಬೆಡ್ಸ್‌) ಮೀಸಲಿಡಲು ದೆಹಲಿ ಹೈಕೋರ್ಟ್‌, ರಾಜ್ಯ ಸರ್ಕಾರಕ್ಕೆ ಅನುಮತಿ ನೀಡಿದೆ.

‘ಕೋವಿಡ್‌ 19 ರೋಗಿಗಳಿಗೆ ಹಾಸಿಗೆ ಮೀಸಲಿಡುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ತಡೆ ನೀಡಿ ಹೈಕೋರ್ಟ್‌ನ ಏಕಸದಸ್ಯ ಪೀಠ ಹೊರಡಿಸಿದ್ದ ಮಧ್ಯಂತರ ಆದೇಶವನ್ನು ನ್ಯಾಯಮೂರ್ತಿಗಳಾದ ಹಿಮಾ ಕೊಯ್ಲಿ ಮತ್ತು ಸುಬ್ರಹ್ಮಣಿಯಂ ಪ್ರಸಾದ್ ಅವರನ್ನೊಳಗೊಂಡ ನ್ಯಾಯಪೀಠ ವಜಾಗೊಳಿಸಿ, ಈ ಆದೇಶ ನೀಡಿತು.

ತಡೆಯಾಜ್ಞೆ ತೆರವುಗೊಳಿಸಿದ ಹೈ ಕೋರ್ಟ್‌, ಮುಂದಿನ ವಿಚಾರಣೆಯನ್ನು ನ.26ರಂದು ಏಕಸದಸ್ಯಪೀಠಕ್ಕೆ ವರ್ಗಾಯಿಸಿತು. ಅಲ್ಲಿಯವರೆಗೆ ಖಾಸಗಿ ಆಸ್ಪತ್ರೆಗಳಲ್ಲಿ ಶೇ 80ರಷ್ಟು ಐಸಿಯು ಹಾಸಿಗೆಗಳ ಮೀಸಲಾತಿಯನ್ನು ಮುಂದುವರಿಯುತ್ತದೆ.

ADVERTISEMENT

ಹೆಚ್ಚುತ್ತಿರುವ ಪ್ರಕರಣಗಳ ಸಂಖ್ಯೆಯನ್ನು ಗಮನದಲ್ಲಿಟ್ಟುಕೊಂಡು, 33 ಖಾಸಗಿ ಆಸ್ಪತ್ರೆಗಳಲ್ಲಿ ಕನಿಷ್ಠ 15 ದಿನಗಳವರೆಗೆ ಕೋವಿಡ್‌ 19 ರೋಗಿಗಳಿಗೆ ಶೇ 80 ರಷ್ಟು ಐಸಿಯು ಹಾಸಿಗೆಗಳನ್ನು ಕಾಯ್ದಿರಿಸಲು ಅಧಿಕಾರ ನೀಡುವಂತೆ ಕೋರಿ ದೆಹಲಿ ಸರ್ಕಾರ ಸಲ್ಲಿಸಿದ್ದ ಮನವಿಯನ್ನು ಹೈಕೋರ್ಟ್ ವಿಚಾರಣೆ ನಡೆಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.