ADVERTISEMENT

ಬಿಎಸ್‌ಪಿ ಶಾಸಕರ ವಿಲೀನದ ವಿರುದ್ಧ ಅರ್ಜಿ ಶೀಘ್ರ ಇತ್ಯರ್ಥಗೊಳಿಸಿ

ರಾಜಸ್ಥಾನ ವಿಧಾನಸಭಾ ಸ್ಪೀಕರ್‌ಗೆ ಹೈಕೋರ್ಟ್‌ ಸೂಚನೆ

ಪಿಟಿಐ
Published 24 ಆಗಸ್ಟ್ 2020, 9:55 IST
Last Updated 24 ಆಗಸ್ಟ್ 2020, 9:55 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಜೈಪುರ: ಬಿಎಸ್‌ಪಿಯ ಆರು ಶಾಸಕರು ಆಡಳಿತಾರೂಢ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಗೊಂಡಿರುವುದರ ವಿರುದ್ಧ ಬಿಜೆಪಿ ಶಾಸಕ ಮದನ್‌ ದಿಲಾವರ್ ಸಲ್ಲಿಸಿರುವ ದೂರನ್ನು ಆದ್ಯತೆ ಮೇರೆಗೆ ಇತ್ಯರ್ಥಗೊಳಿಸುವಂತೆ ರಾಜಸ್ಥಾನ ಹೈಕೋರ್ಟ್‌ ವಿಧಾನಸಭಾ ಸ್ಪೀಕರ್‌ ಅವರಿಗೆ ತಿಳಿಸಿದೆ.

ಕಾಂಗ್ರೆಸ್‌ ಪಕ್ಷದಲ್ಲಿ ಬಿಎಸ್‌ಪಿ ಶಾಸಕರ ವಿಲೀನ ಕುರಿತು ಮದನ್‌ ದಿಲಾವರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ, ಮೂರು ತಿಂಗಳೊಳಗೆ ಈ ದೂರನ್ನು ಪರಿಹರಿಸಿ ಶಾಸಕರ ಅರ್ಹತೆಯ ಬಗ್ಗೆ ತೀರ್ಮಾನ ಪ್ರಕಟಿಸುವಂತೆ ವಿಧಾನಸಭೆಯ ಸ್ಪೀಕರ್‌ ಅವರಿಗೆ ಸೂಚಿಸಿದೆ.

ಶಾಸಕರ ವಿಲೀನದ ವಿರುದ್ಧ ಮದನ್ ದಿಲಾವರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದನ್ಯಾಯಮೂರ್ತಿ ಮಹೇಂದ್ರ ಕುಮಾರ್ ಗೋಯೆಲ್ ಅವರನ್ನೊಳಗೊಂಡ ಏಕಸದಸ್ಯ ಪೀಠ, ಈ ದೂರಿಗೆ ಸಂಬಂಧಿಸಿದಂತೆವಿಧಾನಸಭೆಯ ಸ್ಪೀಕರ್ ಅವರನ್ನು ಸಂಪರ್ಕಿಸುವಂತೆ ಮದನ್‌ ಅವರಿಗೆ ಸೂಚಿಸಿದೆ ಎಂದು ರಾಜಸ್ಥಾನ ವಿಧಾನಸಭೆಯ ಸ್ಪೀಕರ್ ಪರ ವಕೀಲರು ತಿಳಿಸಿದ್ದಾರೆ.

ADVERTISEMENT

ಬಿಎಸ್‌ಪಿ ಶಾಸಕರು ಕಾಂಗ್ರೆಸ್‌ನಲ್ಲಿ ವಿಲೀನಗೊಂಡಿದ್ದರ ವಿರುದ್ಧ ಬಿಜೆಪಿ ಶಾಸಕ ಮದನ್ ದಿಲಾವರ್ ಅವರು ಮಾರ್ಚ್ 16ರಂದು ರಾಜಸ್ಥಾನ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.