ADVERTISEMENT

11ನೇ ತರಗತಿ ಪ್ರವೇಶಕ್ಕೆ ಸಿಇಟಿಮಹಾರಾಷ್ಟದ ಆದೇಶ ರದ್ದು

ಪಿಟಿಐ
Published 10 ಆಗಸ್ಟ್ 2021, 11:00 IST
Last Updated 10 ಆಗಸ್ಟ್ 2021, 11:00 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಮುಂಬೈ (ಪಿಟಿಐ): ಮಹಾರಾಷ್ಟ್ರದ ಕಿರಿಯ ಕಾಲೇಜುಗಳಲ್ಲಿ 11ನೇ ತರಗತಿಗೆ ಪ್ರವೇಶವನ್ನು ಕಲ್ಪಿಸಲು ಸರ್ಕಾರ ನಡೆಸಲು ಉದ್ದೇಶಿಸಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು (ಸಿಇಟಿ) ಬಾಂಬೆ ಹೈಕೋರ್ಟ್‌ ರದ್ದುಪಡಿಸಿದೆ.

ಕೋವಿಡ್‌ ಕಾರಣದಿಂದ ಸಿಇಟಿ ನಡೆಸುವುದು ನ್ಯಾಯಯುತ ಕ್ರಮವಲ್ಲ. ವಿದ್ಯಾರ್ಥಿಗಳ ಬದುಕಿಗೇ ಧಕ್ಕೆ ತರಲಿದೆ ಎಂದು ನ್ಯಾಯಮೂರ್ತಿಗಳಾದ ಆರ್.ಡಿ.ಧನುಕಾ ಮತ್ತು ಆರ್‌.ಐ.ಚಗ್ಲಾ ಅವರಿದ್ದ ವಿಭಾಗೀಯ ಪೀಠ ಹೇಳಿತು.

ರಾಜ್ಯದಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷ ಕಿರಿಯ ಕಾಲೇಜುಗಳಿಗೆ ಪ್ರವೇಶ ಬಯಸಿದ್ದ ಎಲ್ಲ ವಿದ್ಯಾರ್ಥಿಗಳಿಗೆ ಆಗಸ್ಟ್ 21ರಂದು ಭೌತಿಕವಾಗಿ ಪ್ರವೇಶ ಪರೀಕ್ಷೆಯನ್ನು ನಡೆಸಲು ಸರ್ಕಾರ ತೀರ್ಮಾನಿಸಿದ್ದು, ಆದೇಶ ಹೊರಡಿಸಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.