ADVERTISEMENT

ಸಿಜೆಐ ನೇಮಕ ಪ್ರಶ್ನಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್‌

ಪಿಟಿಐ
Published 16 ಜನವರಿ 2023, 12:46 IST
Last Updated 16 ಜನವರಿ 2023, 12:46 IST
ದೆಹಲಿ ಹೈಕೋರ್ಟ್‌
ದೆಹಲಿ ಹೈಕೋರ್ಟ್‌   

ನವದೆಹಲಿ: ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌ ಅವರನ್ನು ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯನ್ನಾಗಿ (ಸಿಜೆಐ) ನೇಮಕ ಮಾಡಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಮೇಲ್ಮನವಿ ಅರ್ಜಿಯನ್ನು ದೆಹಲಿ ಹೈಕೋರ್ಟ್‌ ಸೋಮವಾರ ವಜಾಗೊಳಿಸಿದೆ.

ಸಂಜೀವ್‌ಕುಮಾರ್‌ ತಿವಾರಿ ಎಂಬುವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) 2022ರ ನವೆಂಬರ್‌ 11ರಂದು ವಿಚಾರಣೆಗೆ ಒಳಪಡಿಸಿದ್ದ ಹೈಕೋರ್ಟ್‌ ನ್ಯಾಯಪೀಠವು ಅರ್ಜಿದಾರರ ಮನವಿ ತಿರಸ್ಕರಿಸಿತ್ತು. ಜೊತೆಗೆ ₹1 ಲಕ್ಷ ಮೊತ್ತದ ದಂಡವನ್ನೂ ವಿಧಿಸಿತ್ತು. ಈ ತೀರ್ಪನ್ನು ಪುನರ್‌ ಪರಿಶೀಲಿಸುವಂತೆ ಕೋರಿ ಅರ್ಜಿದಾರರು ಮೇಲ್ಮನವಿ ಸಲ್ಲಿಸಿದ್ದರು.

ಇದರ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಸಂಜೀವ್‌ ಸಚ್‌ದೇವ ಮತ್ತು ವಿಕಾಸ್‌ ಮಹಾಜನ್‌ ಅವರನ್ನೊಳಗೊಂಡ ದ್ವಿಸದಸ್ಯ ನ್ಯಾಯಪೀಠವು ‘ಮೇಲ್ಮನವಿ ಅರ್ಜಿಯನ್ನು ಮಾನ್ಯ ಮಾಡಲು ಆಗುವುದಿಲ್ಲ’ ಎಂದು ಹೇಳಿತು.

ADVERTISEMENT

‘ಮರುಪರಿಶೀಲನಾ ಅರ್ಜಿಯ ಹಿಂದೆ ಮರು ವಿಚಾರಣೆಯ ಹಿತಾಸಕ್ತಿ ಇರುವಂತಿದೆ. ಇದನ್ನು ಅನುಮತಿಸಲಾಗುವುದಿಲ್ಲ’ ಎಂದು ನ್ಯಾಯಪೀಠ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.