ನವದೆಹಲಿ: ಕಲ್ಲಿದ್ದಲು ಕಳ್ಳಸಾಗಣೆ ಪ್ರಕರಣದ ವಿಚಾರಣೆಗೆ ಸಂಬಂಧಿಸಿದಂತೆ ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ ಪತ್ನಿ ರುಜೀರಾ ಬ್ಯಾನರ್ಜಿ ಅವರಿಗೆ ನ್ಯಾಯಾಲಯದ ಎದುರು ನೇರ ಹಾಜರಾತಿಯಿಂದ ದೆಹಲಿ ಹೈಕೋರ್ಟ್ ವಿನಾಯಿತಿ ನೀಡಿದೆ.
ನ್ಯಾಯಮೂರ್ತಿ ಯೋಗೇಶ್ ಖನ್ನಾ ಅವರು, ರುಜೀರಾ ಬ್ಯಾನರ್ಜಿಗೆ ಅವರಿಗೆ ದಸರಾ ರಜೆ ಮುಗಿಯುವವರೆಗೂ ತಾತ್ಕಾಲಿಕವಾಗಿ ಖುದ್ದು ಹಾಜರಾತಿಯಿಂದ ವಿನಾಯಿತಿ ನೀಡಿದ್ದಾರೆ.
ರುಜೀರಾ ಬ್ಯಾನರ್ಜಿ ಅವರು ವಿಚಾರಣಾಧೀನ ನ್ಯಾಯಾಲಯದ ಎದುರು ವಿಚಾರಣೆಗೆ ಖುದ್ದು ಹಾಜರಾಗುವಂತೆ ಅಕ್ಟೋಬರ್ 12ರಂದು ಆದೇಶಿಸಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.