ADVERTISEMENT

ಅಲೋಪತಿ ವಿರುದ್ಧ ತಪ್ಪು ಮಾಹಿತಿ: ರಾಮದೇವ್‌ಗೆ ಸಮನ್ಸ್ ಜಾರಿ

ಪಿಟಿಐ
Published 27 ಅಕ್ಟೋಬರ್ 2021, 21:28 IST
Last Updated 27 ಅಕ್ಟೋಬರ್ 2021, 21:28 IST
ಅಲೋಪತಿ ವಿರುದ್ಧ ತಪ್ಪು ಮಾಹಿತಿ
ಅಲೋಪತಿ ವಿರುದ್ಧ ತಪ್ಪು ಮಾಹಿತಿ   

ನವದೆಹಲಿ: ಕೋವಿಡ್-19 ಸಾಂಕ್ರಾಮಿಕದ ವೇಳೆ ಅಲೋಪತಿ ವಿರುದ್ಧ ತಪ್ಪು ಮಾಹಿತಿ ಹರಡಿದ ಆರೋಪದ ಮೇಲೆ ಹಲವು ವೈದ್ಯರ ಸಂಘಗಳು ದಾಖಲಿಸಿದ್ದ ಮೊಕದ್ದಮೆಯ ಮೇರೆಗೆ ದೆಹಲಿ ಹೈಕೋರ್ಟ್ ಬುಧವಾರ ರಾಮದೇವ್‌ ಅವರಿಗೆ ಸಮನ್ಸ್ ಜಾರಿ ಮಾಡಿದೆ.

ಸಾಮಾಜಿಕ ಮಾಧ್ಯಮ ವೇದಿಕೆಗಳಾದ ಗೂಗಲ್, ಫೇಸ್‌ಬುಕ್ ಮತ್ತು ಟ್ವಿಟರ್‌ಗಳಿಗೂ ನ್ಯಾಯಾಲಯ ನೋಟಿಸ್ ನೀಡಿದೆ.

ನ್ಯಾಯಮೂರ್ತಿ ಸಿ. ಹರಿಶಂಕರ್ ಅವರು, ಪ್ರತಿಕ್ರಿಯೆ ಸಲ್ಲಿಸಲು ರಾಮ್‌ದೇವ್‌ ಅವರಿಗೆ ನಾಲ್ಕು ವಾರಗಳ ಕಾಲಾವಕಾಶ ನೀಡಿದರು. ವಿಚಾರಣೆಯನ್ನು ಜನವರಿಗೆ ಮುಂದೂಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.