ADVERTISEMENT

ಅರ್ಜಿ ವಾಪಸ್‌: ಮಹುವಾಗೆ ಹೈಕೋರ್ಟ್ ಒಪ್ಪಿಗೆ

ಪಿಟಿಐ
Published 2 ಫೆಬ್ರುವರಿ 2024, 13:21 IST
Last Updated 2 ಫೆಬ್ರುವರಿ 2024, 13:21 IST
ಮಹುವಾ ಮೊಯಿತ್ರಾ
ಮಹುವಾ ಮೊಯಿತ್ರಾ   

ನವದೆಹಲಿ: ಸರ್ಕಾರಿ ಬಂಗಲೆ ಖಾಲಿ ಮಾಡುವಂತೆ ತಮಗೆ ನೀಡಲಾಗಿದ್ದ ನೋಟಿಸ್ ವಿರುದ್ಧ ಸಲ್ಲಿಸಿದ್ದ ಅರ್ಜಿಯನ್ನು ವಾಪಸ್ ಪಡೆಯಲು ಟಿಎಂಸಿಯ ಉಚ್ಚಾಟಿತ ಸಂಸದೆ ಮಹುವಾ ಮೊಯಿತ್ರಾ ಅವರಿಗೆ ದೆಹಲಿ ಹೈಕೋರ್ಟ್ ಒಪ್ಪಿಗೆ ನೀಡಿದೆ. 

ಸಂಸತ್ ಸದಸ್ಯತ್ವದಿಂದ ಉಚ್ಚಾಟನೆಗೊಂಡ ಮಹುವಾ ಅವರಿಗೆ ಬಂಗಲೆ ಖಾಲಿ ಮಾಡುವಂತೆ ಸೂಚಿಸಿ ಡೈರೆಕ್ಟೊರೇಟ್ ಆಫ್ ಎಸ್ಟೇಟ್ (ಡಿಒಇ) ನೋಟಿಸ್ ನೀಡಿತ್ತು. ಇದರ ವಿರುದ್ಧ ಮಹುವಾ ಅವರು ನ್ಯಾಯಾಲಯದ ಮೊರೆಹೋಗಿದ್ದರು. 

ಆದರೆ, ಈಗಾಗಲೇ ಮಹುವಾ ಅವರು ಬಂಗಲೆಯನ್ನು ಖಾಲಿ ಮಾಡಿದ್ದರಿಂದಾಗಿ ಈ ಅರ್ಜಿ ನಿರರ್ಥಕ ಎಂದು ಅವರ ಪರ ವಕೀಲರು ತಿಳಿಸಿದರು. ಈ ಹಿನ್ನೆಲೆಯಲ್ಲಿ ಅರ್ಜಿ ವಾಪಸ್ ಪಡೆಯಲು ಹೈಕೋರ್ಟ್ ಒಪ್ಪಿಗೆ ನೀಡಿತು. 

ADVERTISEMENT

ಸಂಸತ್ತಿನಲ್ಲಿ ಪ್ರಶ್ನೆ ಕೇಳಲು ಉದ್ಯಮಿ ದರ್ಶನ್ ಹಿರಾನಂದಾನಿ ಅವರಿಂದ ಉಡುಗೊರೆ ಮತ್ತು ಹಣ ಪಡೆದಿದ್ದಾರೆ ಎಂಬ ಆರೋಪದಡಿ ಮಹುವಾ ಅವರು ಕಳೆದ ವರ್ಷದ ಡಿಸೆಂಬರ್ 8ರಂದು ಲೋಕಸಭೆಯಿಂದ ಉಚ್ಚಾಟನೆಯಾಗಿದ್ದರು. ಆ ಬಳಿಕ ಸರ್ಕಾರಿ ಬಂಗಲೆ ಖಾಲಿ ಮಾಡುವಂತೆ ಸೂಚಿಸಲಾಗಿತ್ತು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.