ನವದೆಹಲಿ: 2ಜಿ ಸ್ಪೆಕ್ಟ್ರಂ ಹಂಚಿಕೆ ಹಗರಣ ಪ್ರಕರಣದಲ್ಲಿ ಕೇಂದ್ರದ ದೂರಸಂಪರ್ಕ ಖಾತೆ ಮಾಜಿ ಸಚಿವ ಎ.ರಾಜಾ ಮತ್ತು ಇತರರನ್ನು ಖುಲಾಸೆಗೊಳಿಸಿರುವುದನ್ನು ಪ್ರಶ್ನಿಸಿ ಸಿಬಿಐ ಸಲ್ಲಿಸಿರುವ ಮೇಲ್ಮನವಿಯ ತುರ್ತು ವಿಚಾರಣೆಗೆ ದೆಹಲಿ ಹೈಕೋರ್ಟ್ ಮಂಗಳವಾರ ನಿರಾಕರಿಸಿತು.
ನಿಗದಿ ದಿನಾಂಕಕ್ಕಿಂತ ಮೊದಲೇ ಮೇಲ್ಮನವಿ ವಿಚಾರಣೆಗೆ ಕೈಗೆತ್ತಿಕೊಳ್ಳಬೇಕು ಎಂದು ಹೆಚ್ಚುವರಿ ಸಾಲಿಸಿಟರ್ ಜನರಲ್ ಸಂಜಯ್ ಜೈನ್ ಸಿಬಿಐ ಪರ ಕೋರಿಕೆ ಮಂಡಿಸಿದರು.
‘ನಿಗದಿಪಡಿಸಿದ ದಿನವೇ ವಿಚಾರಣೆ ನಡೆಸಲಾಗುವುದು’ ಎಂದು ನ್ಯಾ. ಎ.ಕೆ.ಚಾವ್ಲಾ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.