ADVERTISEMENT

CM ಸ್ಥಾನದಿಂದ ಕೇಜ್ರಿವಾಲ್‌ ವಜಾಗೊಳಿಸುವಂತೆ PIL: ಅರ್ಜಿ ತಿರಸ್ಕರಿಸಿದ ಹೈಕೋರ್ಟ್

ಪಿಟಿಐ
Published 4 ಏಪ್ರಿಲ್ 2024, 7:51 IST
Last Updated 4 ಏಪ್ರಿಲ್ 2024, 7:51 IST
<div class="paragraphs"><p>ಅರವಿಂದ ಕೇಜ್ರಿವಾಲ್</p></div>

ಅರವಿಂದ ಕೇಜ್ರಿವಾಲ್

   

(ಪಿಟಿಐ ಚಿತ್ರ)

ನವದೆಹಲಿ: ಅಬಕಾರಿ ನೀತಿ ಸಂಬಂಧಿತ ಹಣ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ವಜಾಗೊಳಿಸುವಂತೆ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ದೆಹಲಿ ಹೈಕೋರ್ಟ್ ಗುರುವಾರ ತಿರಸ್ಕರಿಸಿದೆ.

ADVERTISEMENT

'ಕೆಲವೊಮ್ಮೆ ವೈಯಕ್ತಿಕ ಹಿತಾಸಕ್ತಿಗಿಂತ ರಾಷ್ಟ್ರೀಯ ಹಿತಾಸಕ್ತಿ ಮುಖ್ಯವಾಗಿರಬೇಕು. ನ್ಯಾಯಾಲಯವಾಗಿ ನಾವು ಕಾನೂನಿನ ಚೌಕಟ್ಟಿನೊಳಗೆ ಹೋಗಬೇಕು. ನೀವು ಹೇಳಿದಂತೆ ಪರಿಹಾರ ನೀಡಲು ಸಾಧ್ಯವಿಲ್ಲ. ಹಾಗಾಗಿ ನೀವು ಕಾನೂನಿನ ಚೌಕಟ್ಟಿನೊಳಗೆ ಸೂಕ್ತವಾದ ಕಾನೂನು ಪ್ರಾಧಿಕಾರ ಅಥವಾ ವೇದಿಕೆಯ ಮುಂದೆ ಹೋಗಬೇಕು' ಎಂದು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಮನಮೋಹನ್ ಮತ್ತು ನ್ಯಾಯಮೂರ್ತಿ ಮನ್ಮೀತ್ ಪಿ.ಎಸ್ ಅರೋರಾ ಅವರಿದ್ದ ಪೀಠ ಸೂಚಿಸಿದೆ.

ಕೇಜ್ರಿವಾಲ್ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ವಜಾಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಇದೇ ರೀತಿಯ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಇತ್ತೀಚೆಗೆ ವಜಾಗೊಳಿಸಿರುವುದಾಗಿ ಪೀಠ ಹೇಳಿದೆ. ಹೀಗಾಗಿ, ವಿಭಿನ್ನ ನಿಲುವನ್ನು ತೆಗೆದುಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದೆ.

ಈ ವಿಚಾರದಲ್ಲಿ ಮಧ್ಯಪ್ರವೇಶಿಸಲು ನ್ಯಾಯಾಲಯ ನಿರಾಕರಿಸಿದ್ದರಿಂದ, ಅರ್ಜಿದಾರ ವಿಷ್ಣು ಗುಪ್ತಾ ತನ್ನ ಅರ್ಜಿಯನ್ನು ಹಿಂತೆಗೆದುಕೊಂಡಿದ್ದಾರೆ ಮತ್ತು ಅವರು ಲೆಫ್ಟಿನೆಂಟ್ ಗವರ್ನರ್ ಅವರನ್ನು ಸಂಪರ್ಕಿಸುವುದಾಗಿ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.