ADVERTISEMENT

ಅನಿಲ್ ದೇಶಮುಖ್‌ಗೆ ಇ.ಡಿ ನೀಡಿದ್ದ ಸಮನ್ಸ್‌ ರದ್ದುಗೊಳಿಸಲು ಬಾಂಬೆ ಹೈಕೋರ್ಟ್ ನಕಾರ

ಅಕ್ರಮ ಹಣ ವರ್ಗಾವಣೆ ಮತ್ತು ಭ್ರಷ್ಟಾಚಾರ ಪ್ರಕರಣ

ಪಿಟಿಐ
Published 29 ಅಕ್ಟೋಬರ್ 2021, 12:14 IST
Last Updated 29 ಅಕ್ಟೋಬರ್ 2021, 12:14 IST
ಅನಿಲ್ ದೇಶಮುಖ್‌
ಅನಿಲ್ ದೇಶಮುಖ್‌   

ಮುಂಬೈ: ಅಕ್ರಮ ಹಣ ವರ್ಗಾವಣೆ ಮತ್ತು ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಗೃಹಸಚಿವ ಅನಿಲ್ ದೇಶಮುಖ್ ಅವರಿಗೆ ಜಾರಿ ನಿರ್ದೇಶನಾಲಯವು (ಇ.ಡಿ) ನೀಡಿದ್ದ ಸಮನ್ಸ್ ಅನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಬಾಂಬೆ ಹೈಕೋರ್ಟ್ ಶುಕ್ರವಾರ ತಿರಸ್ಕರಿಸಿದೆ.

ಅನಿಲ್ ದೇಶಮುಖ್ ಸಲ್ಲಿಸಿರುವ ಮನವಿ ಅರ್ಜಿಯು ಇ.ಡಿ ಮತ್ತು ಸಿಬಿಐಗೆ ಸಮನ್ಸ್‌ ಅನ್ನು ರದ್ದುಗೊಳಿಸುವಂತೆ ಆದೇಶ ನೀಡಲು ಅರ್ಹವಾಗಿಲ್ಲ. ಅವರ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳುವಂತಿಲ್ಲ ಎಂದೂ ಕೋರ್ಟ್ ನಿರ್ಬಂಧ ವಿಧಿಸಿದೆ.

ಆದರೆ, ದೇಶಮುಖ್ ಅವರು ಪ್ರಕರಣದಲ್ಲಿ ಬಂಧನಕ್ಕೊಳಗಾದರೆ, ಇತರ ಸಾಮಾನ್ಯ ದಾವೆದಾರರಂತೆ ಪರಿಹಾರ ಕ್ರಮಕ್ಕಾಗಿ ಸೂಕ್ತ ನ್ಯಾಯಾಲಯವನನ್ನು ಸಂಪರ್ಕಿಸುವ ಹಕ್ಕನ್ನು ಹೊಂದಿದ್ದಾರೆ ಎಂದೂ ಹೈಕೋರ್ಟ್ ಹೇಳಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.