ADVERTISEMENT

ಅಗ್ನಿಪಥ ಯೋಜನೆ: ತಡೆಯಾಜ್ಞೆಗೆ ದೆಹಲಿ ಹೈಕೋರ್ಟ್‌ ನಕಾರ

ಪಿಟಿಐ
Published 25 ಆಗಸ್ಟ್ 2022, 11:20 IST
Last Updated 25 ಆಗಸ್ಟ್ 2022, 11:20 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ನವದೆಹಲಿ: ಸಶಸ್ತ್ರ ಪಡೆಗಳಿಗೆ ನೇಮಕಾತಿ ನಡೆಸಲು ಕೇಂದ್ರ ಸರ್ಕಾರ ಪ್ರಕಟಿಸಿರುವ ಅಗ್ನಿಪಥ ಯೋಜನೆಗೆ ತಡೆಯಾಜ್ಞೆ ನೀಡಲು ದೆಹಲಿ ಹೈಕೋರ್ಟ್‌ ಗುರುವಾರ ನಿರಾಕರಿಸಿದೆ.

ಈ ಯೋಜನೆಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳಿಗೆ ನಾಲ್ಕು ವಾರಗಳೊಳಗೆ ಪ್ರತಿಕ್ರಿಯೆ ನೀಡುವಂತೆ ಮುಖ್ಯ ನ್ಯಾಯಮೂರ್ತಿ ಸತೀಶ್‌ ಚಂದ್ರ ಶರ್ಮಾ ಮತ್ತು ನ್ಯಾಯಮೂರ್ತಿ ಸುಬ್ರಮಣಿಯಂ ಪ್ರಸಾದ್‌ ಅವರಿದ್ದ ನ್ಯಾಯಾಪೀಠವು ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ.

ಯೋಜನೆಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳಿಗೆ ಕ್ರೋಡೀಕೃತ ಉತ್ತರವನ್ನು ಸಲ್ಲಿಸಲು ಮತ್ತು ಅಗ್ನಿಪಥ ಯೋಜನೆಯನ್ನು ಪ್ರಕಟಿಸುವ ಮೊದಲು ಸೇನೆ, ನೌಕಾಪಡೆ ಮತ್ತು ವಾಯುಪಡೆಗಳು ನೀಡಿದ್ದ ಜಾಹೀರಾತುಗಳಿಗೆ ಅನುಗುಣವಾಗಿ ನಡೆಯತ್ತಿರುವ ನೇಮಕಾತಿ ಪ್ರಕ್ರಿಯೆಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳಿಗೆ ಪ್ರತ್ಯೇಕವಾಗಿ ಪ್ರತಿಕ್ರಿಯೆ ನೀಡುವಂತೆ ನ್ಯಾಯಾಲಯವು ಕೇಂದ್ರ ಸರ್ಕಾರಕ್ಕೆ ನಿರ್ದೇಶಿಸಿದೆ.

ADVERTISEMENT

ಅರ್ಜಿಗಳ ವಿಚಾರಣೆ ಪೂರ್ಣಗೊಳ್ಳುವವರೆಗೆ ಯೋಜನೆಗೆ ತಡೆಯಾಜ್ಞೆ ನೀಡಬೇಕೆಂದು ಅರ್ಜಿದಾರರೊಬ್ಬರ ವಕೀಲರು ನ್ಯಾಯಾಲಯವನ್ನು ಕೋರಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಾಲಯವು, ಮಧ್ಯಂತರ ಆದೇಶ ನೀಡಲು ಸಾಧ್ಯವಿಲ್ಲ ಎಂದು ತಡೆಯಾಜ್ಞೆಗೆ ನಿರಾಕರಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.