ನವದೆಹಲಿ: ಹೊಸ ಖಾಸಗಿ ನೀತಿಗೆ ಸಂಬಂಧಿಸಿದಂತೆ ನಡೆಯುತ್ತಿರುವ ತನಿಖೆಗಾಗಿ ತ್ವರಿತ ಮೆಸೇಜಿಂಗ್ ಅಪ್ಲಿಕೇಷನ್ ಕುರಿತು ಕೆಲವು ಮಾಹಿತಿ ಒದಗಿಸಲು ಭಾರತದ ಸ್ಪರ್ಧಾ ಆಯೋಗವು (ಸಿಸಿಐ) ಫೇಸ್‌ಬುಕ್ ಮತ್ತು ವಾಟ್ಸ್‌ಆಪ್‌ಗೆ ನೀಡಿರುವ ನೋಟಿಸ್‌ಗೆ ತಡೆ ನೀಡಲು ದೆಹಲಿ ಹೈಕೋರ್ಟ್ ನಿರಾಕರಿಸಿದೆ.
ನ್ಯಾಯಮೂರ್ತಿಗಳಾದ ಅನುಪ್ ಜೈರಾಮ್ ಭಂಭಾನಿ ಮತ್ತು ಜಸ್ಮೀತ್ ಸಿಂಗ್ ಅವರನ್ನೊಳಗೊಂಡ ರಜಾಕಾಲದ ಪೀಠವು ಸಿಸಿಐ ನೀಡಿರುವ ನೋಟಿಸ್‌ಗೆ ತಡೆ ನೀಡಲು ನಿರಾಕರಿಸಿದೆ. ಜುಲೈ 9ಕ್ಕೆ ಈ ಪ್ರಕರಣದ ವಿಚಾರಣೆಯನ್ನು ನಿಗದಿಪಡಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.