ADVERTISEMENT

ನೌಕಾಪಡೆ ನೇಮಕಾತಿ: ಕೇಂದ್ರದ ಪ್ರತಿಕ್ರಿಯೆ ಕೇಳಿದ ದೆಹಲಿ ಹೈಕೋರ್ಟ್

ಪಿಟಿಐ
Published 22 ನವೆಂಬರ್ 2021, 14:31 IST
Last Updated 22 ನವೆಂಬರ್ 2021, 14:31 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ನವದೆಹಲಿ: ಭಾರತೀಯ ನೌಕಾಪಡೆಯ ಅಧಿಕಾರಿಗಿಂತ ಕೆಳಗಿನ ದರ್ಜೆಯ ಸಿಬ್ಬಂದಿ (ಪಿಬಿಒಆರ್‌) ನೇಮಕಾತಿ ಪ್ರಕ್ರಿಯೆಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯ ಕುರಿತು ಪ್ರತಿಕ್ರಿಯೆ ಸಲ್ಲಿಸುವಂತೆ ಕೇಂದ್ರ ಸರ್ಕಾರಕ್ಕೆ ದೆಹಲಿ ಹೈಕೋರ್ಟ್ ಸೋಮವಾರ ಸೂಚಿಸಿದೆ

ಲಿಖಿತ ಪರೀಕ್ಷೆಯ ಮೊದಲು ಕಟ್‌ ಆಫ್‌ ಅಂಕಗಳ ಆಧಾರದಲ್ಲಿ ಶಾರ್ಟ್‌ ಲಿಸ್ಟಿಂಗ್‌ ಮಾನದಂಡ ಅಳವಡಿಸಿಕೊಳ್ಳುವುದು ತಾರತಮ್ಯ ಎಂದು ಪ್ರತಿಪಾದಿಸಿ ವಿಕ್ರಮ್‌ ಸ್ವಾಮಿ ಎಂಬುವವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿ.ಎನ್‌. ಪಟೇಲ್‌ ಮತ್ತು ನ್ಯಾಯಮೂರ್ತಿ ಜ್ಯೋತಿ ಸಿಂಗ್‌ ಅವರನ್ನೊಳಗೊಂಡ ನ್ಯಾಯಪೀಠವು ಕೇಂದ್ರ ಸರ್ಕಾರಕ್ಕೆ ನೋಟಿಸ್‌ ನೀಡಿದೆ.

ಜನವರಿ 11 ರಂದು ಮುಂದಿನ ವಿಚಾರಣೆ ನಡೆಯಲಿದ್ದು, ಭಾರತೀಯ ನೌಕಾಪಡೆಯ ಮುಖ್ಯಸ್ಥರು ಮತ್ತು ಮಾನವ ಸಂಪನ್ಮೂಲ ಯೋಜನೆ ಮತ್ತು ನೇಮಕಾತಿ ನಿರ್ದೇಶನಾಲಯ ಈ ಕುರಿತು ತಮ್ಮ ನಿಲುವು ತಿಳಿಸುವಂತೆ ನ್ಯಾಯಾಲಯ ಸೂಚಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.