ADVERTISEMENT

ಐಎನ್‌ಎಕ್ಸ್‌ ಮೀಡಿಯಾ ಹಗರಣ| ಚಿದಂಬರಂ ವಿರುದ್ಧ ವಿಚಾರಣೆಗೆ ದೆಹಲಿ ಹೈಕೋರ್ಟ್‌ ತಡೆ

ಐಎನ್‌ಎಕ್ಸ್‌ ಮೀಡಿಯಾ ಭ್ರಷ್ಟಾಚಾರ ಪ್ರಕರಣ

ಪಿಟಿಐ
Published 18 ಮೇ 2021, 7:29 IST
Last Updated 18 ಮೇ 2021, 7:29 IST
ಪಿ.ಚಿದಂಬರಂ
ಪಿ.ಚಿದಂಬರಂ   

ನವದೆಹಲಿ: ಐಎನ್‌ಎಕ್ಸ್‌ ಮೀಡಿಯಾ ಭ್ರಷ್ಟಾಚಾರ ಪ್ರಕರಣದಲ್ಲಿ ಕಾಂಗ್ರೆಸ್‌ ಮುಖಂಡ ಪಿ.ಚಿದಂಬರಂ ಹಾಗೂ ಪುತ್ರ ಕಾರ್ತಿ ಅವರ ಪಾತ್ರ ಕುರಿತು ಸಿಬಿಐ ತನಿಖೆ ನಡೆಸುತ್ತಿದ್ದು, ಈ ಸಂಬಂಧ ಕೆಳ ನ್ಯಾಯಾಲಯ ನಡೆಸುತ್ತಿರುವ ವಿಚಾರಣೆಗೆ ದೆಹಲಿ ಹೈಕೋರ್ಟ್‌ ಮಂಗಳವಾರ ತಡೆ ನೀಡಿದೆ.

ಆರೋಪಿತರಿಗೆ ದಾಖಲೆಗಳನ್ನು ಒದಗಿಸುವಂತೆ ವಿಚಾರಣಾ ನ್ಯಾಯಾಲಯ ನೀಡಿದ್ದ ನಿರ್ದೇಶನವನ್ನು ಪ್ರಶ್ನಿಸಿ ಸಿಬಿಐ ಮೇಲ್ಮನವಿ ಸಲ್ಲಿಸಿದೆ. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡುವಂತೆ ಸೂಚಿಸಿ ನ್ಯಾಯಾಮೂರ್ತಿ ಸುರೇಶಕುಮಾರ್‌ ಕೈಟ್‌ ಅವರು ಚಿದಂಬರಂ ಹಾಗೂ ಇತರರಿಗೆ ನೋಟಿಸ್‌ ನೀಡಿದ್ದಾರೆ.

ಚಿದಂಬರಂ ಅವರು ಹಣಕಾಸು ಸಚಿವರಾಗಿದ್ದ ಸಂದರ್ಭದಲ್ಲಿ, ವಿದೇಶಿ ಬಂಡವಾಳ ಉತ್ತೇಜನಾ ಮಂಡಳಿಯು ₹ 305 ಕೋಟಿ ವಿದೇಶಿ ಹೂಡಿಕೆಯನ್ನು ಸ್ವೀಕರಿಸಲು ಐಎನ್‌ಎಕ್ಸ್‌ ಮೀಡಿಯಾಕ್ಕೆ ಅನುಮತಿ ನೀಡಿತ್ತು. ಈ ರೀತಿ ಅನುಮತಿ ನೀಡುವ ವೇಳೆ ಭಾರಿ ಅವ್ಯವಹಾರ ನಡೆದಿದೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ 2017ರಲ್ಲಿ ಸಿಬಿಐ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿತು.

ADVERTISEMENT

ನಂತರ, ಜಾರಿ ನಿರ್ದೇಶನಾಲಯವು (ಇ.ಡಿ) ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಿಸಿ, ತನಿಖೆ ಆರಂಭಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.