ADVERTISEMENT

ಹೈಕೋರ್ಟ್‌ನಲ್ಲಿ ದೇಶಮುಖ್‌ ವಿರುದ್ಧ ಸಿಂಗ್‌ ಪಿಐಎಲ್‌: ಬುಧವಾರ ವಿಚಾರಣೆ

ಪಿಟಿಐ
Published 30 ಮಾರ್ಚ್ 2021, 11:09 IST
Last Updated 30 ಮಾರ್ಚ್ 2021, 11:09 IST
.
.   

ಮುಂಬೈ: ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶಮುಖ್‌ ವಿರುದ್ಧ ಸಿಬಿಐ ತನಿಖೆ ನಡೆಸಬೇಕೆಂದು ಕೋರಿ ಮುಂಬೈ ಮಾಜಿ ಪೊಲೀಸ್ ಕಮಿಷನರ್‌ ಪರಮ್ ವೀರ್ ಸಿಂಗ್ ಸಲ್ಲಿಸಿರುವ ಪಿಐಎಲ್‌ನ ವಿಚಾರಣೆಯನ್ನು ಬುಧವಾರ ನಡೆಸುವುದಾಗಿ ಬಾಂಬೆ ಹೈಕೋರ್ಟ್ ಮಂಗಳವಾರ ತಿಳಿಸಿದೆ.

ದೇಶಮುಖ್‌ ಅವರು ಮುಂಬೈನ ಬಾರ್‌ ಮತ್ತು ರೆಸ್ಟೋರೆಂಟ್‌ಗಳಿಂದ ₹100 ಕೋಟಿ ಸಂಗ್ರಹಿಸಿಕೊಡಬೇಕು ಎಂದು ಪೊಲೀಸ್‌ ಅಧಿಕಾರಿಗೆ ಸೂಚಿಸಿದ್ದರು ಎಂಬುದು ಸಿಂಗ್ ಅವರ ಆರೋಪ. ಈ ಕುರಿತು ಅವರು ಮುಖ್ಯಮಂತ್ರಿಗೆ ಪತ್ರವನ್ನೂ ಬರೆದಿದ್ದರು.

ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಕೋರಿ ಸಿಂಗ್‌ ಮಾರ್ಚ್‌ 25ರಂದು ಹೈಕೋರ್ಟ್‌ನಲ್ಲಿ ಪಿಐಎಲ್‌ ಸಲ್ಲಿಸಿದ್ದರು. ರಾಜ್ಯದ ಪೊಲೀಸ್‌ ವರ್ಗಾವಣೆ ಮತ್ತು ನಿಯೋಜನೆಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ಕುರಿತು ಕೂಡ ಪಿಐಎಲ್‌ನಲ್ಲಿ ಪ್ರಸ್ತಾಪಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.