ADVERTISEMENT

ವೈವಾಹಿಕ ಅತ್ಯಾಚಾರ: ಬುಧವಾರ ದೆಹಲಿ ಹೈಕೋರ್ಟ್ ತೀರ್ಪು

​ಪ್ರಜಾವಾಣಿ ವಾರ್ತೆ
Published 10 ಮೇ 2022, 15:52 IST
Last Updated 10 ಮೇ 2022, 15:52 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಭಾರತೀಯ ದಂಡ ಸಂಹಿತೆಯ ಸೆಕ್ಷನ್ 375ರಲ್ಲಿರುವ ವೈವಾಹಿಕ ಅತ್ಯಾಚಾರವನ್ನು ಅಪರಾಧ ಮುಕ್ತಗೊಳಿಸುವ 2ನೇ ವಿನಾಯಿತಿಯ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳಿಗೆ ಸಂಬಂಧಿಸಿದ ತೀರ್ಪನ್ನು ದೆಹಲಿ ಹೈಕೋರ್ಟ್ ಬುಧವಾರ ಪ್ರಕಟಿಸಲಿದೆ.

ನ್ಯಾಯಮೂರ್ತಿಗಳಾದ ರಾಜೀವ್ ಶಕ್ಧರ್ ಮತ್ತು ಸಿ. ಹರಿಶಂಕರ್ ಅವರನ್ನೊಳಗೊಂಡ ನ್ಯಾಯಪೀಠವು ಫೆಬ್ರುವರಿಯಲ್ಲಿ ಅರ್ಜಿಗಳ ವಿಚಾರಣೆಯನ್ನು ಮುಕ್ತಾಯಗೊಳಿಸಿದ್ದು, ತೀರ್ಪನ್ನು ಮೇ 11ಕ್ಕೆ ಕಾಯ್ದಿರಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT