ADVERTISEMENT

ಹೈದರಾಬಾದ್‌ನಲ್ಲಿ ಎಚ್‌ಡಿಕೆ–ಕೆಟಿಆರ್ ಭೇಟಿ: ಪ್ರಮುಖ ವಿಚಾರಗಳ ಬಗ್ಗೆ ಚರ್ಚೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 11 ಸೆಪ್ಟೆಂಬರ್ 2022, 9:24 IST
Last Updated 11 ಸೆಪ್ಟೆಂಬರ್ 2022, 9:24 IST
ತೆಲಂಗಾಣ ಸಚಿವ ಕೆ.ಟಿ.ರಾಮರಾವ್‌ ಮತ್ತು ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ
ತೆಲಂಗಾಣ ಸಚಿವ ಕೆ.ಟಿ.ರಾಮರಾವ್‌ ಮತ್ತು ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ    

ಬೆಂಗಳೂರು: ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರು ತೆಲಂಗಾಣ ಸಚಿವ ಕೆ.ಟಿ.ರಾಮರಾವ್‌ ಅವರನ್ನು ಹೈದರಾಬಾದ್‌ನಲ್ಲಿ ಭೇಟಿ ಮಾಡಿ ಪ್ರಮುಖ ವಿಚಾರಗಳ ಕುರಿತು ಚರ್ಚೆ ನಡೆಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಕುಮಾರಸ್ವಾಮಿ, ‘ತೆಲಂಗಾಣ ರಾಜ್ಯದ ಮಾನ್ಯ ಪೌರಾಡಳಿತ, ನಗರಾಭಿವೃದ್ಧಿ, ಕೈಗಾರಿಕೆ, ವಾಣಿಜ್ಯ, ಮಾಹಿತಿ ತಂತ್ರಜ್ಞಾನ ಮತ್ತು ಸಂಪರ್ಕ ಖಾತೆ ಸಚಿವರಾದ ಕೆ.ಟಿ. ರಾಮರಾವ್ ಅವರನ್ನು ಹೈದರಾಬಾದ್‌ನಲ್ಲಿ ಭೇಟಿ ಮಾಡಿ ಚರ್ಚೆ ನಡೆಸಲಾಯಿತು’ ಎಂದು ತಿಳಿಸಿದ್ದಾರೆ.

‘ಪ್ರಖರ ದೂರದೃಷ್ಟಿಯುಳ್ಳ, ನವೀನ ವಿಚಾರಗಳ, ಸದೃಢ ನಾಯಕತ್ವ-ವ್ಯಕ್ತಿತ್ವದ ಅವರೊಂದಿನ ಚರ್ಚೆ ಬಹಳ ಅರ್ಥಪೂರ್ಣವಾಗಿತ್ತು’ ಎಂದು ಹೇಳಿದ್ದಾರೆ.

ADVERTISEMENT

‘ಈ ಸಂದರ್ಭದಲ್ಲಿ ಕರ್ನಾಟಕ-ತೆಲಂಗಾಣ ರಾಜ್ಯಗಳ ವಿಷಯಗಳು ಹಾಗೂ ರಾಷ್ಟ್ರ ರಾಜಕಾರಣಕ್ಕೆ ಸಂಬಂಧಿಸಿದ ಪ್ರಮುಖ ವಿಷಯಗಳ ಬಗ್ಗೆ ಚರ್ಚೆ ನಡೆಯಿತು. ಕೆಟಿಆರ್‌ ಅವರ ಆದರಾಭಿಮಾನ, ವಿಶ್ವಾಸ, ಗೌರವಕ್ಕೆ ನನ್ನ ಮನಸ್ಸು ತುಂಬಿಬಂದಿದೆ’ ಎಂದು ಎಚ್‌ಡಿಕೆ ಟ್ವೀಟಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.