ADVERTISEMENT

ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಆರೋಗ್ಯ ಸುಧಾರಣೆ: ಆಸ್ಪತ್ರೆ

ಪಿಟಿಐ
Published 11 ಜುಲೈ 2021, 8:03 IST
Last Updated 11 ಜುಲೈ 2021, 8:03 IST
   

ಲಖನೌ: ಲಖನೌದ ಸಂಜಯ್‌ ಗಾಂಧಿ ವೈದ್ಯಕೀಯ ವಿಜ್ಞಾನಗಳ ಸ್ನಾತಕೋತ್ತರ ಸಂಸ್ಥೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್‌ ಸಿಂಗ್‌ ಅವರ ಆರೋಗ್ಯ ಸ್ಥಿತಿ ಸುಧಾರಿಸುತ್ತಿದೆ ಎಂದು ಆಸ್ಪತ್ರೆ ಭಾನುವಾರ ತಿಳಿಸಿದೆ.

ಸಂಸ್ಥೆಯ ನಿರ್ದೇಶಕ ಪ್ರೊ. ಆರ್ ಕೆ ಧೀಮಾನ್ ಅವರು ಸಿಂಗ್ ಅವರನ್ನ ಪ್ರತಿದಿನವೂ ಮೇಲ್ವಿಚಾರಣೆ ಮಾಡುತ್ತಿದ್ದಾರೆ ಎಂದು ಅದು ಹೇಳಿದೆ.

'ವೈಟಲ್ ಪ್ಯಾರಮೀಟರ್ಸ್‌ ಸದ್ಯ ನಿಯಂತ್ರಣದಲ್ಲಿವೆ. ಅವರು ತನ್ನ ಆರೈಕೆಯಲ್ಲಿ ತೊಡಗಿರುವ ಸಿಬ್ಬಂದಿಯೊಂದಿಗೆ ಮಾತನಾಡುತ್ತಿದ್ದಾರೆ. ಸಿಸಿಎಂ, ಕಾರ್ಡಿಯಾಲಜಿ, ನ್ಯೂರಾಲಜಿ, ಎಂಡೋಕ್ರೈನಾಲಜಿ ಮತ್ತು ನೆಫ್ರಾಲಜಿಯ ಹಿರಿಯ ತಜ್ಞವೈದ್ಯರ ಸಮಿತಿಯು ಅವರ ದೈನಂದಿನ ಆರೋಗ್ಯದ ಮೇಲೆ ನಿಗಾವಹಿಸಿದ್ದಾರೆ. ಇಂದು ಅವರು ನಿನ್ನೆಗಿಂತ ಉತ್ತಮವಾಗಿದ್ದಾರೆ' ಎಂದು ಎಸ್‌ಜಿಪಿಜಿಐ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಿದೆ.

ADVERTISEMENT

ರಾಜಸ್ಥಾನದ ರಾಜ್ಯಪಾಲರೂ ಆಗಿದ್ದ 89 ವರ್ಷದ ಕಲ್ಯಾಣ್ ಸಿಂಗ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಜು.4ರಂದು ಸಂಜಯ್‌ ಗಾಂಧಿ ವೈದ್ಯಕೀಯ ಸಂಸ್ಥೆಯ ಐಸಿಯುಗೆ ದಾಖಲಿಸಲಾಯಿತು. ಅವರು ಕಳೆದ ಮೂರು ವಾರಗಳಿಂದ ಅನಾರೋಗ್ಯ ಪೀಡಿತರಾಗಿದ್ದಾರೆ.

ಇದಕ್ಕೂ ಮುನ್ನ ಅವರು ಡಾ. ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.