ADVERTISEMENT

ಲಂಚ ಪ್ರಕರಣ: ಆರೋಗ್ಯ ಸಚಿವಾಲಯದ ಅಧೀನ ಕಾರ್ಯದರ್ಶಿ ಸೆರೆ

ಪಿಟಿಐ
Published 6 ಮೇ 2023, 13:48 IST
Last Updated 6 ಮೇ 2023, 13:48 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ವಿದೇಶದಲ್ಲಿ ಉನ್ನತ ವೈದ್ಯಕೀಯ ವ್ಯಾಸಂಗಕ್ಕೆ ಅಗತ್ಯವಿರುವ ಅನುಮತಿ ಪತ್ರ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಅಧೀನ ಕಾರ್ಯದರ್ಶಿ ಸೋನು ಕುಮಾರ್‌ ಅವರನ್ನು ಸಿಬಿಐ ಶನಿವಾರ ಬಂಧಿಸಿದೆ.

ಅಮೆರಿಕದಲ್ಲಿ ನೆಲೆಸಿರುವ ಭಾರತೀಯ ವೈದ್ಯರೊಬ್ಬರು ಅಲ್ಲಿ ಉನ್ನತ ವ್ಯಾಸಂಗಕ್ಕೆ ಕೇಂದ್ರ ಆರೋಗ್ಯ ಸಚಿವಾಲಯದಿಂದ ಅಗತ್ಯವಿರುವ ಅನುಮತಿ ಪತ್ರ ಕೋರಿ ಅರ್ಜಿ ಸಲ್ಲಿಸಿದ್ದರು. ಈ ಅಧಿಕೃತ ಪತ್ರ ನೀಡಲು ₹ 1.5 ಲಕ್ಷ ಲಂಚ ನೀಡುವಂತೆ ಅಧೀನ ಅಧಿಕಾರಿಯು ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ದೂರು ದಾಖಲಾಗಿದ್ದರಿಂದ ಅಧಿಕಾರಿಯನ್ನು ಬಂಧಿಸಲಾಗಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT