ನವದೆಹಲಿ (ಪಿಟಿಐ): ಆಯುಷ್ಮಾನ್ ಭಾರತ್ ಆರೋಗ್ಯ ಖಾತೆಯನ್ನು (ಎಬಿಎಚ್ಎ) ಸಂತಾನೋತ್ಪತ್ತಿ ಮತ್ತು ಮಕ್ಕಳ ಆರೋಗ್ಯ (ಆರ್‌ಸಿಎಚ್) ಹಾಗೂ ರಾಷ್ಟ್ರೀಯ ಕ್ಷಯರೋಗ ನಿರ್ಮೂಲನೆ ಕಾರ್ಯಕ್ರಮ (ನಿಕ್ಷಯ) ಪೋರ್ಟಲ್‌ಗಳ ಜತೆಗೆ ಸಂಪರ್ಕ ಕಲ್ಪಿಸಲು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಅಗತ್ಯ ಕ್ರಮ ತೆಗೆದುಕೊಳ್ಳಬೇಕು ಎಂದು ಕೇಂದ್ರ ಆರೋಗ್ಯ ಕಾರ್ಯದರ್ಶಿ ಸೂಚಿಸಿದ್ದಾರೆ.
ಆಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್ ಡ್ಯಾಶ್‌ಬೋರ್ಡ್ ಪ್ರಕಾರ, 2024ರ ಏಪ್ರಿಲ್‌ನಲ್ಲಿ ದೇಶದಲ್ಲಿ ಒಟ್ಟು 5,894.60 ಲಕ್ಷಗಳಷ್ಟು ಎಇಬಿಎಚ್‌ಎ ಖಾತೆಗಳಿವೆ ಎಂದು ಆರೋಗ್ಯ ಕಾರ್ಯದರ್ಶಿ ಅಪೂರ್ವ ಚಂದ್ರ ತಿಳಿಸಿದ್ದಾರೆ.
ಈ ರೀತಿ ಸಂಪರ್ಕ ಕಲ್ಪಿಸಿದರೆ ರೋಗಿಗಳಿಗೆ ಮತ್ತು ಮಧ್ಯಸ್ಥಗಾರರಿಗೆ ಡಿಜಿಟಲ್ ಆರೋಗ್ಯ ದಾಖಲೆಗಳನ್ನು ಪಡೆಯುವುದು ಸುಲಭವಾಗುತ್ತದೆ ಎಂದು ಅವರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.