ನವದೆಹಲಿ: ಕೋವಿಡ್ ಲಸಿಕೆಯ ಎರಡನೇ ಡೋಸ್ ತೆಗೆದುಕೊಂಡ ವ್ಯಕ್ತಿಯಲ್ಲಿ, 14 ದಿನಗಳ ನಂತರ ಸೋಂಕು ಕಾಣಿಸಿಕೊಳ್ಳಬಹುದು. ಆದರೆ, ಎರಡು ಡೋಸ್‌ಗಳನ್ನು ತೆಗೆದುಕೊಂಡ ಕಾರಣ ವ್ಯಕ್ತಿಗೆ ಸೋಂಕಿನಿಂದ ಅಧಿಕ ರಕ್ಷಣೆ ಸಿಗುವುದು ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಪರಿಷತ್ತು (ಐಸಿಎಂಆರ್) ಬಿಡುಗಡೆ ಮಾಡಿರುವ ವರದಿಯಲ್ಲಿ ಹೇಳಲಾಗಿದೆ.
ಲಸಿಕೆಯ ಎರಡು ಡೋಸ್‌ಗಳನ್ನು ತೆಗೆದುಕೊಂಡ ವ್ಯಕ್ತಿಯಲ್ಲಿ ಕೋವಿಡ್ ದೃಢಪಟ್ಟರೆ ಅದನ್ನು ‘ಬ್ರೇಕ್‌ಥ್ರೂ ಇನ್‌ಫೆಕ್ಷನ್’ ಎಂದು ಕರೆಯಲಾಗುತ್ತದೆ.
ಆರೋಗ್ಯ ಕಾರ್ಯಕರ್ತರು ‘ಬ್ರೇಕ್‌ಥ್ರೂ ಇನ್‌ಫೆಕ್ಷನ್’ಗೆ ಒಳಗಾಗುವ ಅಪಾಯ ಹೆಚ್ಚು. ಆದರೆ, ಲಸಿಕೆಯ ಎರಡು ಡೋಸ್‌ಗಳನ್ನು ಪಡೆಯುವ ಮೂಲಕ ಅವರಿಗೆ ಇಂಥ ಸೋಂಕಿನಿಂದ ರಕ್ಷಣೆ ಸಿಗಲಿದೆ ಎಂದು ಮೂರು ಪ್ರತ್ಯೇಕ ಅಧ್ಯಯನಗಳಿಂದ ತಿಳಿದು ಬಂದಿದೆ.
ಚಂಡೀಗಡ ಮೂಲದ ಪಿಜಿಐಎಂಇಆರ್, ದೆಹಲಿಯ ಎಐಐಎಂಎಸ್ ಹಾಗೂ ಇನ್ಸ್‌ಟಿಟ್ಯೂಟ್ ಫಾರ್ ಜಿನೋಮಿಕ್ಸ್ ಆ್ಯಂಡ್ ಇಂಟಿಗ್ರೇಟಿವ್ ಬಯೋಲಜಿ (ಐಜಿಐಬಿ) ಅಧ್ಯಯನ ನಡೆಸಿವೆ. ಅಧ್ಯಯನ ವರದಿಯು ‘ನ್ಯೂ ಇಂಗ್ಲಂಡ್ ಜರ್ನಲ್ ಆಫ್ ಮೆಡಿಸಿನ್’ನಲ್ಲಿ ಪ್ರಕಟವಾಗಿದೆ.
‘ಬ್ರೇಕ್‌ಥ್ರೂ ಇನ್‌ಫೆಕ್ಷನ್’ಗೆ ಸಂಬಂಧಿಸಿ ದೇಶದಲ್ಲಿ ನಡೆದ ಬೃಹತ್ ಸಮೀಕ್ಷೆಯೂ ಇದಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.